ETV Bharat / bharat

44 ದಿನದ ಬಳಿಕ ದೇಶದಲ್ಲಿ ಅತೀ ಕಡಿಮೆ ಕೋವಿಡ್​ ಪತ್ತೆ: ಅಮೆರಿಕ ಬಳಿಕ ಭಾರತದಲ್ಲೇ ಹೆಚ್ಚು ಲಸಿಕೆ ವಿತರಣೆ

author img

By

Published : May 28, 2021, 10:14 AM IST

ಕಳೆದೆರಡು ವಾರಗಳಿಂದ ದೇಶದಲ್ಲಿ ಹೊಸ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಿದ್ದು, ಚೇತರಿಕೆ ಪ್ರಮಾಣ ಶೇ.90.34ಕ್ಕೆ ಹೆಚ್ಚಳವಾಗಿದೆ. ಇನ್ನು ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಅಮೆರಿಕದ ಬಳಿಕ ಭಾರತ ಎರಡನೇ ಸ್ಥಾನದಲ್ಲಿದೆ. ಈವರೆಗೆ ಭಾರತದಲ್ಲಿ 20.54 ಕೋಟಿ ಮಂದಿಗೆ ವ್ಯಾಕ್ಸಿನ್‌ ಡೋಸ್‌ಗಳನ್ನು ನೀಡಲಾಗಿದೆ. ಕೋವಿಡ್ ವ್ಯಾಕ್ಸಿನ್‌ ಅಭಿಯಾನ 132 ದಿನಗಳನ್ನು ಪೂರೈಸಿದ್ದು ನಿನ್ನೆ ಸಂಜೆ 7 ಗಂಟೆಯವರೆಗೆ (ಗುರುವಾರ) 26.58 ಮಂದಿಗೆ ಲಸಿಕೆ ನೀಡಲಾಗಿದೆ.

Total number of corona cases, deaths, Vaccination in India
44 ದಿನದ ಬಳಿಕ ದೇಶದಲ್ಲಿ ಅತೀ ಕಡಿಮೆ ಕೋವಿಡ್​ ಕೇಸ್

ನವದೆಹಲಿ: ದೇಶದಲ್ಲಿ 44 ದಿನಗಳ ಬಳಿಕ ಅತೀ ಕಡಿಮೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 23,43,152ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 1,86,364 ಕೇಸ್​ಗಳು ವರದಿಯಾಗಿದ್ದು, 3,660 ಮಂದಿ ಸೋಂಕಿನಿಂದ ಪ್ರಾಣಬಿಟ್ಟಿದ್ದಾರೆ. ದೇಶದಲ್ಲೀಗ ಕೋವಿಡ್​ ಪ್ರಕರಣಗಳ ಸಂಖ್ಯೆ 2,75,55,457 ಹಾಗೂ ಮೃತರ ಸಂಖ್ಯೆ 3,18,895ಕ್ಕೆ ಏರಿಕೆಯಾಗಿದೆ.

ಚೇತರಿಕೆ ಪ್ರಮಾಣ ಶೇ.90.34ಕ್ಕೆ ಹೆಚ್ಚಳ

ಕಳೆದೆರಡು ವಾರಗಳಿಂದ ಹೊಸ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಿದ್ದು, ಗುರುವಾರ ಒಂದೇ ದಿನದಲ್ಲಿ 2,59,459 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇಲ್ಲಿಯವರೆಗೆ ಒಟ್ಟು 2,48,93,410 ಜನರು ವೈರಸ್​ನಿಂದ ಚೇತರಿಸಿಕೊಂಡಿದ್ದು, ಗುಣಮುಖರ ಪ್ರಮಾಣ ಶೇ.90.34ಕ್ಕೆ ಹೆಚ್ಚಳವಾಗಿದೆ.

20.57 ಕೋಟಿ ಮಂದಿಗೆ ವ್ಯಾಕ್ಸಿನ್​

131 ದಿನಗಳಲ್ಲಿ ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು (20,57,20,660) ಜನರಿಗೆ ಕೋವಿಡ್​ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.