ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಹೊಸ ಕೋವಿಡ್ ಕೇಸ್ಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ 4,40,00,138 ಕ್ಕೆ ಏರಿಕೆಯಾಗಿದ್ದು 54 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸದ್ಯಕ್ಕೆ ದೇಶದಲ್ಲಿ 1,43,384 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ 20,958 ರೋಗಿಗಳು ಕೋವಿಡ್ ವೈರಸ್ನಿಂದ ಚೇತರಿಸಿಕೊಂಡಿದ್ದು, ದೇಶಾದ್ಯಂತ ಈವರೆಗೆ ಒಟ್ಟು 4,33,09,484 ಮಂದಿ ಕೊರೊನಾದಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಾವಿನ ಪ್ರಮಾಣ ಶೇ. 1.20 ರಷ್ಟಿದ್ದರೆ, ಚೇತರಿಕೆ ದರ ಶೇ. 98.48 ರಷ್ಟಿದೆ.
ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿ ಈವರೆಗೆ 203.94 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಶುಕ್ರವಾರ 33,87,173 ಡೋಸ್ ಲಸಿಕೆ ನೀಡಲಾಗಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಪ್ರಕಾರ, ಜುಲೈ 29 ರ ವರೆಗೆ ಒಟ್ಟು 87.48 ಕೋಟಿ ಮಂದಿಯನ್ನ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ 4,04,399 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಓದಿ: ರಾಜ್ಯದಲ್ಲಿ ಏರಿಕೆಯಾಗುತ್ತಿದೆ ಕೋವಿಡ್: ಇಂದು 2,130 ಮಂದಿಗೆ ಸೋಂಕು ದೃಢ, ನಾಲ್ಕು ಮಂದಿ ಬಲಿ