ETV Bharat / bharat

ಇಂದು ದೇಶದಲ್ಲಿ 2.09 ಲಕ್ಷ ಜನರಿಗೆ ಕೋವಿಡ್​ ಪಾಸಿಟಿವ್​.. 959 ಮಂದಿ ಸಾವು - ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಪ್ರಮಾಣ

ಕಳೆದ 24 ಗಂಟೆಯಲ್ಲಿ 2,62,628 ಮಂದಿ ಕೋವಿಡ್​​ನಿಂದ ಚೇತರಿಕೆ ಕಂಡಿದ್ದಾರೆ. ದಿನವೊಂದರಲ್ಲಿ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವವರ ಪೈಕಿ ಸುಮಾರು ಶೇಕಡಾ 15.77ರಷ್ಟು ಮಂದಿಯಲ್ಲಿ ಸೋಂಕು ಕಂಡುಬರುತ್ತಿದೆ. ಈವರೆಗೆ ಒಟ್ಟು 3,89,76,122 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

India reports 2,09,918 new #COVID19 cases

author img

By

Published : Jan 31, 2022, 9:20 AM IST

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಪ್ರಮಾಣದ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2,09,918 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 959 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದು ನಿನ್ನೆಗಿಂತ ಹೆಚ್ಚಿನ ಪ್ರಮಾಣದ್ದಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಗುಣಮುಖರಾಗಿರುವವರ ಪ್ರಮಾಣ ಶೇಕಡಾ 94.37ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ - ಅಂಶಗಳು ದೃಢಪಡಿಸಿವೆ. ಈವರೆಗೆ ದೇಶದಲ್ಲಿ ಸುಮಾರು 4,95,050 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 18,31,268 ಇದ್ದು, ಒಟ್ಟು ಸೋಂಕಿತರಲ್ಲಿ ಶೇಕಡಾ 4.43 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್​: ಈವರೆಗೆ ಸುಮಾರು 1,66,03,96,227 ಕೋಟಿ ಡೋಸ್​ ವ್ಯಾಕ್ಸಿನೇಷನ್ ನೀಡಲಾಗಿದೆ. ಶನಿವಾರ ಒಂದೇ ದಿನದಲ್ಲಿ 28,90,986 ಮಂದಿಗೆ ಲಸಿಕೆ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.