ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 21,257 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,38,94,312 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ
ದೇಶದಲ್ಲಿ ಮಹಾಮಾರಿ ಸೋಂಕಿಗೆ ನಿನ್ನೆ 318 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 4,49,856 ಜನರು ಮಾರಕ ಸೋಂಕಿಗೆ ಮೃತಪಟ್ಟಿದ್ದಾರೆ. ಸದ್ಯಕ್ಕೆ 2,40,221 ಸಕ್ರಿಯ ಪ್ರಕರಣಗಳಿದ್ದು, ಕಳೆದ 205 ದಿನಕ್ಕೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.
ಬುಧವಾರ ಭಾರತ್ ಬಯೋಟೆಕ್ ಕಂಪನಿ ಮೊದಲ ಬಾರಿಗೆ 2 ರಿಂದ 18 ವರ್ಷದ ಮಕ್ಕಳಿಗೆ ಸಂಬಂಧಿಸಿದ ಕೋವಿಡ್ -19 ಲಸಿಕೆ ಪ್ರಯೋಗದ ದತ್ತಾಂಶವನ್ನು ಸಲ್ಲಿಸಿರುವುದಾಗಿ ತಿಳಿಸಿದೆ.
ದೇಶದ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಕೇರಳದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಇಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 12, 288 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, 141 ಮಂದಿ ಮೃತಪಟ್ಟಿದ್ದಾರೆ.