ನವದೆಹಲಿ: ಕಳೆದ 24 ಗಂಟೆಯ ಅವಧಿಯಲ್ಲಿ 2,17,353 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ 1,185 ಮಂದಿ ಸಾವನ್ನಪ್ಪಿದ್ದಾರೆ. 1,18,302 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿಅಂಶ:
ದೇಶದಲ್ಲಿ ಈವರೆಗೆ ಒಟ್ಟು 1,42,91,917 ಕೊರೊನಾ ಪ್ರಕರಣಗಳು ದಾಖಲಾಗಿವೆ. 1,25,47,866 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 1,74,308 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 15,69,743 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಇದನ್ನೂ ಓದಿ: ಶುಕ್ರವಾರ,ಶನಿವಾರ 2.5 ಲಕ್ಷ ಕೊರೊನಾ ಟೆಸ್ಟ್ಗೆ ಕೇರಳ ಸರ್ಕಾರದ ನಿರ್ಧಾರ
ಕೋವಿಡ್ ಪರೀಕ್ಷೆ:
ಏಪ್ರಿಲ್ 15 ರ ವರೆಗೆ 26,34,76,625 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 14,73,210 ಸ್ಯಾಂಪಲ್ಸ್ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.
ಲಸಿಕೆ ವಿತರಣೆ:
ದೇಶಾದ್ಯಂತ ಇಲ್ಲಿಯವರೆಗೆ 11.72 ಕೋಟಿಗೂ ಅಧಿಕ ಜನರಿಗೆ ಭಾರತದಲ್ಲಿ ತಯಾರಿಸಿದ ಲಸಿಕೆಯನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 27 ಲಕ್ಷಕ್ಕೂ ಹೆಚ್ಚಿನ ಪ್ರಮಾಣದ ಲಸಿಕೆ ನೀಡಲಾಗಿದೆ.
ಇದನ್ನೂ ಓದಿ: ಸುರ್ಜೆವಾಲಾ, ದಿಗ್ವಿಜಯ್ ಸಿಂಗ್, ಹರ್ಸಿಮ್ರತ್ ಕೌರ್ಗೆ ಕೊರೊನಾ ಸೋಂಕು