ETV Bharat / bharat

India COVID Report: 199 ದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ - COVID update news

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 22,842 ಹೊಸ ಕೋವಿಡ್-19(COVID-19) ಪ್ರಕರಣಗಳು ದೃಢಪಟ್ಟಿದ್ದು, ಕಳೆದ 199 ದಿನಕ್ಕೆ ಹೋಲಿಸಿದರೆ ನಿನ್ನೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.

India reports 22,842 new COVID cases
India reports 22,842 new COVID cases
author img

By

Published : Oct 3, 2021, 12:03 PM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 22,842 ಹೊಸ ಕೋವಿಡ್-19(COVID-19) ಪ್ರಕರಣಗಳು ದೃಢಪಟ್ಟಿದ್ದು 244 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಮಹಾಮಾರಿ ಸೋಂಕಿಗೆ ನಿನ್ನೆ 244 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 4,48,817 ಜನರು ಕೋವಿಡ್​ನಿಂದ ಮೃತಪಟ್ಟಿದ್ದಾರೆ. ಸದ್ಯಕ್ಕೆ 2,70,557 ಸಕ್ರಿಯ ಪ್ರಕರಣಗಳಿದ್ದು, ಕಳೆದ 199 ದಿನಕ್ಕೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.

ಶನಿವಾರ 25,930 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ ಒಟ್ಟು 3,30,94,529 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 90,51,75,348 ಜನ ಲಸಿಕೆ ಪಡೆದಿದ್ದಾರೆ.

ದೇಶದ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಕೇರಳದಲ್ಲಿ ಅತಿ ಹೆಚ್ಚು ಕೋವಿಡ್​ ಪ್ರಕರಣಗಳು ದಾಖಲಾಗುತ್ತಿವೆ. ಇಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 13,217 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, 121 ಜನ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.