ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 2,67,334 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 4529 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 3,89,851 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
- " class="align-text-top noRightClick twitterSection" data="">
ಈವರೆಗಿನ ಅಂಕಿಅಂಶ:
ದೇಶದಲ್ಲಿ ಈವರೆಗೆ ಒಟ್ಟು 2,54,96,330 ಕೊರೊನಾ ಪ್ರಕರಣಗಳು ದಾಖಲಾಗಿವೆ. 2,19,86,363 ಸೋಂಕಿತರು ಗುಣಮುಖರಾಗಿದ್ದಾರೆ. 2,83,248 ಸುಮಾರು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 32,26,719 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಕೋವಿಡ್ ಪರೀಕ್ಷೆ:
ಮೇ 18 ರವರೆಗೆ 32,03,01,177 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 20,08,296 ಸ್ಯಾಂಪಲ್ಸ್ ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.
ಲಸಿಕೆ ವಿತರಣೆ:
ದೇಶಾದ್ಯಂತ ಇಲ್ಲಿಯವರೆಗೆ 18,58,09,302 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ