ETV Bharat / bharat

ದೇಶದಲ್ಲಿ ಕೋವಿಡ್‌ ಇಳಿಕೆ: ನಿನ್ನೆ 30,941 ಹೊಸ ಕೇಸ್, 350 ಸೋಂಕಿತರ ಸಾವು - ಕೇಂದ್ರ ಆರೋಗ್ಯ ಸಚಿವಾಲಯ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 30,941 ಮಂದಿಗೆ ಕೋವಿಡ್‌ ದೃಢಪಟ್ಟಿದೆ. 350 ಜನ ಸೋಂಕಿಗೆ ಬಲಿಯಾಗಿದ್ದಾರೆ.

India reports 30,941 fresh COVID-19 cases, 36,275 recoveries, and 350 deaths in the last 24 hours
ದೇಶದಲ್ಲಿ ಇಳಿಕೆಯತ್ತ ಕೋವಿಡ್‌; ನಿನ್ನೆ 30,941 ಹೊಸ ಕೇಸ್, 350 ಸೋಂಕಿತರ ಸಾವು
author img

By

Published : Aug 31, 2021, 10:33 AM IST

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಮತ್ತೆ ಇಳಿಕೆಯತ್ತ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 30,941 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಈ ಅವಧಿಯಲ್ಲಿ 350 ಜನ ವೈರಸ್‌ಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟಾರೆ 4,38,560 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಕಳೆದೊಂದು ದಿನದಲ್ಲಿ ಸೋಂಕಿನಿಂದ 36,27 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಚೇತರಿಸಿಕೊಂಡವರ ಸಂಖ್ಯೆ 3,19,59,680 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,70,640ಕ್ಕೆ ಏರಿಕೆಯಾಗಿದೆ.

ಈವರೆಗೆ ಒಟ್ಟು 64,05,28,644 ಮಂದಿಗೆ ಲಸಿಕೆ ನೀಡಲಾಗಿದೆ. 52,15,41,098 ಜನರಿಗೆ ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದ್ದು, ನಿನ್ನೆ ಒಂದೇ ದಿನ 13,94,573 ಮಂದಿಯನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್​ ಹೇಳಿದೆ. ದೇಶದಲ್ಲಿ ದಾಖಲಾಗುತ್ತಿರುವ ಪ್ರಕರಣಗಳ ಪೈಕಿ ಅರ್ಧದಷ್ಟು ಕೇಸ್‌ಗಳು ನೆರೆಯ ಕೇರಳದಲ್ಲೇ ದಾಖಲಾಗುತ್ತಿರುವ ಕೇಂದ್ರ ಆರೋಗ್ಯ ಸಚಿವಾಲಯದ ಕಳವಳಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಒಂದೇ ದಿನ ದೇಶದಲ್ಲಿ 42,909 ಮಂದಿಗೆ ಕೋವಿಡ್‌ ಸೋಂಕು, 380 ಮಂದಿ ಬಲಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.