ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಕೆ ಕಾಣುತ್ತಿದೆ. ಕಳೆದ 24 ಗಂಟೆಯಲ್ಲಿ 34,113 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 346 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಒಂದೇ ದಿನದಲ್ಲಿ 91,930 ಜನರು ಸೋಂಕಿನಿಂದ ಗುಣಮುಖರಾಗುವ ಮೂಲಕ ದೇಶದಲ್ಲಿ ಒಟ್ಟಾರೆ 4,16,77,641 ಮಂದಿ ಪೂರ್ಣ ಚೇತರಿಸಿಕೊಂಡಂತಾಗಿದೆ. ಗುಣಮುಖರಾಗಿರುವವರ ಪ್ರಮಾಣ ಶೇಕಡಾ 97.37ರಷ್ಟಿದೆ.
ನಿನ್ನೆಯಿಂದ 24 ಗಂಟೆಗಳ ಅವಧಿಯಲ್ಲಿ 346 ಮಂದಿ ಕೊರೊನಾಗೆ ಬಲಿಯಾಗುವ ಮೂಲಕ ಈವರೆಗೆ ದೇಶದಲ್ಲಿ ಸುಮಾರು 5,09,011 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲೀಗ 3.19 ರಷ್ಟು ಮಾತ್ರ ಡೆತ್ರೇಟ್ ಇದೆ.
ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,78,882 ಇದ್ದು, ಒಟ್ಟು ಸೋಂಕಿತರಲ್ಲಿ ಶೇಕಡಾ 1.12 ರಷ್ಟು ಮಂದಿ ಮಾತ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್: ದೇಶದಲ್ಲಿ ಈವರೆಗೆ ಸುಮಾರು 1,72,95,87,490 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ.
ಇದನ್ನೂ ಓದಿ: ಇಸ್ರೋದಿಂದ ವರ್ಷದ ಮೊದಲ ಉಡ್ಡಯನ ಯಶಸ್ವಿ: ಕಕ್ಷೆ ಸೇರಿದ 3 ಉಪಗ್ರಹಗಳು