ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 3,49,691 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 2,767 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 2,17,113 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿ-ಅಂಶ:
ದೇಶದಲ್ಲಿ ಈವರೆಗೆ ಒಟ್ಟು 1,69,60,172 ಕೊರೊನಾ ಪ್ರಕರಣಗಳು ದಾಖಲಾಗಿವೆ. 1,40,85,110 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 1,92,311 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 26,82,751 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಓದಿ: ಕೋವಿಡ್ ಪರಿಹಾರ ಕಾರ್ಯದಲ್ಲಿ ವಾಯುಸೇನೆ ವಿಮಾನಗಳ ನಿರಂತರ ಸೇವೆ
ಕೋವಿಡ್ ಪರೀಕ್ಷೆ:
ಏಪ್ರಿಲ್ 24ರವರೆಗೆ 27,79,18,810 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 17,19,588 ಸ್ಯಾಂಪಲ್ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.
ಲಸಿಕೆ ವಿತರಣೆ:
ದೇಶಾದ್ಯಂತ ಇಲ್ಲಿಯವರೆಗೆ 14,09,16,417 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.