ನವದೆಹಲಿ: ದೇಶದಲ್ಲಿ ಕೊರೊನಾ ಭೀತಿ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 35,342 ಕೇಸ್ಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 483 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,19,470 ಕ್ಕೆ ಏರಿದೆ.
ಇಲ್ಲಿವರೆಗೆ 3,12,93,062 ಕೊರೊನಾ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, ಸದ್ಯ 4,05,513 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಯಲ್ಲಿ 38,652 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 3,04,68,079 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈವರೆಗೆ 42,34,17,030 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.