ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 35,662 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 281 ಮಂದಿ ಮೃತಪಟ್ಟಿದ್ದಾರೆ. ಇದೀಗ ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,34,17,390ಕ್ಕೆ ಹಾಗೂ ಸಾವಿನ ಸಂಖ್ಯೆ 4,44,529ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ.97.65 ರಷ್ಟು ಅಂದರೆ 3,26,32,222 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 3,40,639 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
78.02 ಕೋಟಿ ಡೋಸ್ ವ್ಯಾಕ್ಸಿನೇಷನ್
ಜನವರಿ 16ರಿಂದ ದೇಶಾದ್ಯಂತ ಕೊರೊನಾ ಲಸಿಕಾಭಿಯಾನ ಆರಂಭಿಸಲಾಗಿದ್ದು, ಈವರೆಗೆ 78,02,17,775 ಡೋಸ್ ವ್ಯಾಕ್ಸಿನ್ ನೀಡಲಾಗಿದೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ ದಾಖಲೆ ಮಟ್ಟದಲ್ಲಿ ಲಸಿಕೆ ವಿತರಣೆ ಮಾಡಲಾಗಿದ್ದು, ಒಂದೇ ದಿನ 2.5 ಕೋಟಿ ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ.
ಇದನ್ನೂ ಓದಿ: ದೇಶಾದ್ಯಂತ 2.25 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಣೆ: ಮೋದಿ ಜನ್ಮದಿನದಂದು ಐತಿಹಾಸಿಕ ದಾಖಲೆ
55 ಕೋಟಿ ಸ್ಯಾಂಪಲ್ಗಳ ಟೆಸ್ಟ್
ಸೆಪ್ಟೆಂಬರ್ 17ರವರೆಗೆ 55,07,80,273 ಸ್ಯಾಂಪಲ್ಗಳನ್ನು ಕೋವಿಡ್ ಟೆಸ್ಟ್ಗೆ ಒಳಪಡಿಸಲಾಗಿದ್ದು, ನಿನ್ನೆ ಒಂದೇ ದಿನ 14,48,833 ಮಂದಿಯನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.