ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,82,315 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 3,780 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 3,38,439 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿ-ಅಂಶ:
ದೇಶದಲ್ಲಿ ಈವರೆಗೆ ಒಟ್ಟು 2,06,65,148 ಕೊರೊನಾ ಪ್ರಕರಣಗಳು ದಾಖಲಾಗಿವೆ. 1,69,51,731 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 2,26,188 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 34,87,229 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಇದನ್ನೂ ಓದಿ: ಆಕ್ಸಿಜನ್ ಸಿಗದೆ ರೋಗಿಗಳು ಸಾಯುವುದು 'ನರಮೇಧ'ಕ್ಕಿಂತ ಕಡಿಮೆಯೇನಲ್ಲ: ಅಲಹಾಬಾದ್ ಹೈಕೋರ್ಟ್
ಕೋವಿಡ್ ಪರೀಕ್ಷೆ:
ಮೇ 4ರವರೆಗೆ 29,48,52,078 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 15,41,299 ಜನರ ಸ್ಯಾಂಪಲ್ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ.
ಲಸಿಕೆ ವಿತರಣೆ:
ದೇಶಾದ್ಯಂತ ಇಲ್ಲಿಯವರೆಗೆ 16,04,94,188 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.