ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,92,488 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 3,689 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,95,57,457 ಕ್ಕೆ ಹಾಗೂ ಮೃತರ ಸಂಖ್ಯೆ 2,15,542 ಕ್ಕೆ ಏರಿಕೆಯಾಗಿದೆ.
ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 3,07,865 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 1,59,92,271 ಜನ ಗುಣಮುಖರಾಗಿದ್ದಾರೆ. ಉಳಿದಂತೆ 33,49,644 ಕೇಸ್ಗಳು ಸಕ್ರಿಯವಾಗಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.
ಇನ್ನು ಈಗಾಗಲೇ 15.68.16.031 ಮಂದಿಗೆ ವಾಕ್ಸಿನೇಷನ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.