ನವದೆಹಲಿ : ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 4,041 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 4,31,68,585ಕ್ಕೆ ಏರಿಕೆಯಾಗಿದೆ. ಹಲವಾರು ದಿನಗಳ ಬಳಿಕ ಸೋಂಕಿತರ ಸಂಖ್ಯೆ 4,000ರ ಗಡಿ ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದೊಂದು ದಿನದಲ್ಲಿ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟು 5,24,651 ಜನ ಸಾವನ್ನಪ್ಪಿದ್ದಾರೆ. ಪ್ರಸ್ತುತ ಭಾರತದಲ್ಲಿ 21,177 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ 2,363 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 4,26,22,767 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಚೇತರಿಕೆಯ ಪ್ರಮಾಣ ಶೇ.98.74ರಷ್ಟಿದೆ.
ಓದಿ: 22 ದಿನಗಳ ಬಳಿಕ ಮತ್ತೆ 3,000 ರ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನೀಡಿರುವ ಅಂಕಿ-ಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದಡಿ ಈವರೆಗೆ 193.83 ಕೋಟಿ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.