ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 42,015 ಕೇಸ್ಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 3,998 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,18,480 ಕ್ಕೆ ಏರಿದೆ.
ಇಲ್ಲಿವರೆಗೆ 3,12,16,337 ಕೊರೊನಾ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, ಸದ್ಯ 4,07,170 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಯಲ್ಲಿ 36,977 ಮಂದಿ ಗುಣಮುಖರಾಗಿದ್ದು, ಇಲ್ಲಿವರೆಗೆ 3,03,90,687 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈವರೆಗೆ 41,54,72,455 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.