ETV Bharat / bharat

ದೇಶದಲ್ಲಿ ಹೊಸದಾಗಿ 42 ಸಾವಿರ COVID Case: ಈವರೆಗೆ ಕೊರೊನಾಗೆ 4.40 ಲಕ್ಷ ಮಂದಿ ಬಲಿ - ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ

ಭಾರತದಲ್ಲಿನ ಒಟ್ಟು ಕೋವಿಡ್​ ಪ್ರಕರಣಗಳ ಸಂಖ್ಯೆ 3,29,45,907ಕ್ಕೆ ಹಾಗೂ ಸಾವಿನ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ.

India covid report
ದೇಶದಲ್ಲಿ ಈವರೆಗೆ ಕೊರೊನಾಗೆ ಬಲಿಯಾದದ್ದು 4,40,225 ಮಂದಿ
author img

By

Published : Sep 4, 2021, 9:58 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 42,618 ಮಂದಿ ಕೋವಿಡ್​ ಸೋಂಕಿತರು ಪತ್ತೆಯಾಗಿದ್ದು, 330 ಮಂದಿ ಮೃತಪಟ್ಟಿದ್ದಾರೆ. ದಿನನಿತ್ಯ ವರದಿಯಾಗುತ್ತಿರುವ ಹೊಸ ಕೇಸ್​ಗಳ ಪೈಕಿ ಶೇ.70ರಷ್ಟು ಪ್ರಕರಣಗಳು ಕೇರಳ ರಾಜ್ಯವೊಂದರಲ್ಲೇ ಪತ್ತೆಯಾಗುತ್ತಿವೆ.

ಇದೀಗ ದೇಶದಲ್ಲಿನ ಒಟ್ಟು ಕೋವಿಡ್​ ಪ್ರಕರಣಗಳ ಸಂಖ್ಯೆ 3,29,45,907ಕ್ಕೆ ಹಾಗೂ ಸಾವಿನ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ ಶೇ.97.73 ರಷ್ಟು ಅಂದರೆ 3,21,00,001 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ ಶೇ.1.23 ರಷ್ಟು (4,05,681) ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಕೋವಿಡ್​​ನಿಂದ ಮೃತಪಟ್ಟವರಿಗೆ ಪ್ರಮಾಣಪತ್ರ ವಿತರಣೆ ವಿಳಂಬ: ಸುಪ್ರೀಂಕೋರ್ಟ್‌ ಅಸಮಾಧಾನ

67.72 ಕೋಟಿ ಡೋಸ್​ ವ್ಯಾಕ್ಸಿನೇಷನ್​

ಜನವರಿ 16ರಿಂದ ದೇಶಾದ್ಯಂತ ಕೊರೊನಾ ಲಸಿಕಾಭಿಯಾನ ಆರಂಭಿಸಲಾಗಿದ್ದು, ಈವರೆಗೆ 67,72,11,205 ಡೋಸ್​ ವ್ಯಾಕ್ಸಿನ್​ ನೀಡಲಾಗಿದೆ. ಕಳೆದ 24 ಗಂಟೆಗಳ 58,85,687 ಜನರು ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.