ನವದೆಹಲಿ: ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ದೇಶದಲ್ಲಿ 44,230 ಮಂದಿಗೆ ಕೊರೊನಾ ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 555 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಇದುವರೆಗೆ ಒಟ್ಟು 3,15,72,344 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇನ್ನು ಕಳೆದ 24 ಗಂಟೆಯಲ್ಲಿ 42,360 ಮಂದಿ ಗುಣಮುಖವಾಗಿದ್ದು, ಈವರೆಗೆ 3,07,43,972 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಒಟ್ಟು 4,05,155 ಸಕ್ರಿಯ ಪ್ರಕರಣಗಳಿವೆ. ಇಲ್ಲಿವರೆಗೆ 4,23,217 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಇಲ್ಲಿಯ ತನಕ ಸುಮಾರು 45,60,33,754 ಜನರಿಗೆ ಕೊರೊನಾ ವ್ಯಾಕ್ಸಿನ್ ನೀಡಲಾಗಿದೆ.