ನವದೆಹಲಿ: ದೇಶದಲ್ಲಿ ಹೊಸದಾಗಿ 44,643 ಜನರಿಗೆ ವೈರಸ್ ದೃಢಪಟ್ಟಿದೆ. ಇನ್ನು 464 ಮಂದಿ ಮೃತಪಟ್ಟಿದ್ದು, ಒಟ್ಟಾರೆ 426,754 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾದಿಂದ 41,096 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಚೇತರಿಸಿಕೊಂಡವರ ಸಂಖ್ಯೆ 3,10,15,844 ಆಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 4,55,719ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಈವರೆಗೆ 49,53,27,595 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.