ನವದೆಹಲಿ : ಕಳೆದ 50 ದಿನಗಳಿಂದ ದೇಶದಲ್ಲಿ ಪತ್ತೆಯಾಗುತ್ತಿರುವ ಹೊಸ ಕೊರೊನಾ ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯೇ ಹೆಚ್ಚಿದೆ. ನಿನ್ನೆ 46,617 ಕೇಸ್ಗಳು ದಾಖಲಾಗಿದ್ದರೆ, 59,384 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 2,95,48,302 ಮಂದಿ ವೈರಸ್ನಿಂದ ಚೇತರಿಸಿಕೊಂಡಿದ್ದಾರೆ.
ಇತ್ತ ನಿಧಾನವಾಗಿ ಸಾವಿನ ಸಂಖ್ಯೆಯೂ ತಗ್ಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 853 ಜನರು ವೈರಸ್ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು 3,04,58,251 ಮಂದಿಗೆ ಸೋಂಕು ತಗುಲಿದಂತಾಗಿದ್ದು, ಮೃತರ ಸಂಖ್ಯೆ 4,00,312ಕ್ಕೆ ಏರಿಕೆಯಾಗಿದೆ.
ಪ್ರಸ್ತುತ 5,09,637 ಪ್ರಕರಣ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನದಡಿ ದೇಶಾದ್ಯಂತ ಈವರೆಗೆ ಲಸಿಕೆಯ 34,00,76,232 ಕೋಟಿಗೂ ಅಧಿಕ ಡೋಸ್ಗಳನ್ನು ನೀಡಲಾಗಿದೆ.