ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 5,476 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,29,62,953 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಶನಿವಾರ ದೇಶದಲ್ಲಿ ಮಹಾಮಾರಿ ಸೋಂಕಿಗೆ 158 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,15,036ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ 59,442 ಸಕ್ರಿಯ ಪ್ರಕರಣಗಳಿವೆ. ನಿನ್ನೆ 9,754 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೇತರಿಕೆ ದರ ಶೇ. 98.66 ರಷ್ಟಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 4,23,88,475ಕ್ಕೆ ಏರಿಕೆಯಾಗಿದೆ. ಜತೆಗೆ ದೈನಂದಿನ ಪಾಸಿಟಿವಿಟಿ ದರ 0.14% ಇದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಮಾರ್ಚ್ 5 ರವರೆಗೆ 77,28,24,246 ಜನರ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಶುಕ್ರವಾರ 9,09,985 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ವ್ಯಾಕ್ಸಿನೇಷನ್ ವಿವರ: ಈವರೆಗೆ ದೇಶದಲ್ಲಿ ಸುಮಾರು1,78,83,79, 249 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.
ಇದನ್ನೂ ಓದಿ: ಉಕ್ರೇನ್ ಬಿಕ್ಕಟ್ಟು ಇಡೀ ವಿಶ್ವಕ್ಕೆ ಪರಿಣಾಮ ಬೀರಲಿದೆ, ಭಾರತ-ರಷ್ಯಾ ಸಂಬಂಧವೂ ಇದಕ್ಕೆ ಹೊರತಲ್ಲ: ರಷ್ಯಾ