ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆಯ 6,594 ಹೊಸ ಕೇಸ್‌ಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,035 ಜನರು ಕೋವಿಡ್ನಿಂದ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 4,26,61,370 ಜನರು ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 50,548 ಸಕ್ರಿಯ ಪ್ರಕರಣಗಳಿವೆ.
ಓದಿ: ಕೊಂಚ ಇಳಿಕೆಯತ್ತ ಕೊರೊನಾ: 8 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢ!
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜೂ.12 ರವರೆಗೆ ಕೋವಿಡ್ಗಾಗಿ 85.54 ಕೋಟಿ ಮಾದರಿಗಳನ್ನು ಇದುವರಿಗೂ ಪರೀಕ್ಷಿಸಲಾಗಿದೆ. ಈ ಪೈಕಿ 3,21,873 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಕರ್ನಾಟಕದಲ್ಲೂ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ರಾಜ್ಯದಲ್ಲಿ 16,190 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 415 ಮಂದಿಗೆ ಸೋಂಕು ದೃಢಪಟ್ಟಿದೆ. 378 ಮಂದಿ ಗುಣಮುಖರಾಗಿದ್ದು, ಕೊರೊನಾದಿಂದ ಸಾವು ಸಂಭವಿಸಿಲ್ಲ. ಸದ್ಯ 3,688 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಭಾರತದ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ನಲ್ಲಿ 195.35 ಕೋಟಿ ಮೀರಿದೆ.