ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,283 ಮಂದಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 437 ಮಂದಿ ಸಾವನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮಂಗಳವಾರ ಒಂದೇ ದಿನ 10,949 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಚೇತರಿಸಿಕೊಂಡವರ ಸಂಖ್ಯೆ 3,39,57,698ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಚೇತರಿಕೆಯ ಪ್ರಮಾಣ ಶೇ.98.33 ರಷ್ಟಿದೆ.
537 ದಿನಗಳ ಬಳಿಕ ಬಳಿಕ ಆ್ಯಕ್ಟಿವ್ ಕೇಸ್ ಪ್ರಮಾಣ ಶೇ.0.32ಕ್ಕೆ ಇಳಿಕೆಯಾಗಿದ್ದು, ಪ್ರಸ್ತುತ 1,11,481 ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 51 ದಿನಗಳಲ್ಲಿ ಪಾಸಿಟಿವಿಟಿ ದರ ಶೇ. 0.80 ಕ್ಕಿಂತ ಕಡಿಮೆಯಾಗಿದೆ. ನ.23 ರವರೆಗೆ ಒಟ್ಟು 63.47 ಕೋಟಿಗೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದಾಖಲೆಯ 118.44 ಕೋಟಿ ಡೋಸ್ ವ್ಯಾಕ್ಸಿನೇಷನ್:
ಜನವರಿ 16 ರಿಂದ ದೇಶಾದ್ಯಂತ ಕೊರೊನಾ ಲಸಿಕಾ ಅಭಿಯಾನ ಆರಂಭಿಸಲಾಗಿದ್ದು, ಈವರೆಗೆ 118.44 ಕೋಟಿಗೂ ಅಧಿಕ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.
ಇದನ್ನೂ ಓದಿ: S-400 ಖರೀದಿ ವಿಚಾರದಲ್ಲಿ ಭಾರತಕ್ಕೆ ಇನ್ನೂ ಕಾಟ್ಸಾ ಕಾಯ್ದೆಯಿಂದ ರಿಯಾಯಿತಿ ನೀಡಿಲ್ಲ: ಅಮೆರಿಕ ಸ್ಪಷ್ಟನೆ