ETV Bharat / bharat

ದೇಶದಲ್ಲಿ ಮತ್ತೆ ಕೋವಿಡ್‌ ದಾಖಲೆ: ಲಕ್ಷ ದಾಟಿದ ಸೋಂಕಿತರು; 9 ಕೋಟಿ ಜನರಿಗೆ ಲಸಿಕೆ - ಐಸಿಎಂಆರ್​

ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ.

India
ಕೊರೊನಾ
author img

By

Published : Apr 8, 2021, 10:27 AM IST

ನವದೆಹಲಿ: ಗುರುವಾರ ಬೆಳಗ್ಗಿನವರೆೆಗೆ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 1,26,789 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೆ ಒಂದು ದಿನದಲ್ಲಿ ದಾಖಲಾದ ಅತಿ ಹೆಚ್ಚು ಸೋಂಕಿತ ಪ್ರಕರಣಗಳ ಸಂಖ್ಯೆಯಾಗಿದೆ.

ಈ ಅವಧಿಯಲ್ಲಿ 685 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 59,258 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕೋವಿಡ್‌ ಆರ್ಭಟ

ಇನ್ನು ಮಹಾರಾಷ್ಟ್ರದಲ್ಲಿ 60 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.

ಲಸಿಕೆ ವಿತರಣೆ:

ದೇಶಾದ್ಯಂತ ಇಲ್ಲಿಯವರೆಗೆ 9 ಕೋಟಿ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಲಸಿಕೆ ವಿಚಾರವಾಗಿ ಕೇಂದ್ರ ರಾಜ್ಯಗಳ ವಾಕ್ಸಮರ:

ಇದೇ ವೇಳೆ ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ರಾಜ್ಯಗಳಿಗೆ ಲಸಿಕೆ ಪೂರೈಸುತ್ತಿಲ್ಲ ಎಂದು ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳು ದೂರಿವೆ. ಆದ್ರೆ, ಈ ಬಗ್ಗೆ ನಿನ್ನೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ಪಷ್ಟನೆ ನೀಡಿದ್ದು, ಲಸಿಕೆ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.