ನವದೆಹಲಿ: ಜಾಗತಿಕ ಶಾಂತಿ ಮತ್ತು ಸ್ಥಿರತೆ ಕಾಯ್ದುಕೊಳ್ಳಲು ಅಂತಾರಾಷ್ಟ್ರೀಯ ವಿಷಯಗಳ ಕುರಿತಂತೆ ಭಾರತ ಮತ್ತು ರಷ್ಯಾದ ಉಭಯ ನಾಯಕರು ಆಳವಾಗಿ ಸಮಾಲೋಚನೆ ನಡೆಸಿದರು.
ಮಾಸ್ಕೋದಲ್ಲಿ ಡಿಜಿ ಮಟ್ಟದ ಸಭೆ ನಡೆಸಲಾಗಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ (ಯುಎನ್‌ಎಸ್‌ಸಿ) ಸಂಬಂಧಿಸಿದ ವಿಷಯಗಳ ಕುರಿತು ದ್ವಿಪಕ್ಷೀಯ ಸಮಾಲೋಚನೆ ನಡೆಸಲಾಯಿತು.
ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಂತಾರಾಷ್ಟ್ರೀಯ ಸಂಸ್ಥೆಗಳ ವಿಭಾಗದ ನಿರ್ದೇಶಕ ಪೀಟರ್ ಇಲಿಚೆವ್ ಅವರು ರಷ್ಯಾದ ನಿಯೋಗದ ನೇತೃತ್ವ ವಹಿಸಿದ್ದರು. ಪ್ರಕಾಶ್ ಗುಪ್ತಾ ಅವರು ಮಾಸ್ಕೋದ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳೊಂದಿಗೆ ಭಾರತೀಯ ನಿಯೋಗವನ್ನು ಮುನ್ನಡೆಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಯುನೈಟೆಡ್ ನೇಷನ್ಸ್ ಸೆಕ್ಯುರಿಟಿ ಕೌನ್ಸಿಲ್ಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ನಿಕಟವಾಗಿ ಕೆಲಸ ಮಾಡಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.