ETV Bharat / bharat

ಖಲಿಸ್ತಾನಿ ಉಗ್ರನ ಹತ್ಯೆ ಆರೋಪ: ರಾಜತಾಂತ್ರಿಕ ಅಧಿಕಾರಿ ಉಚ್ಚಾಟನೆ ಬಳಿಕ, ಕೆನಡಿಯನ್ನರಿಗೆ ವೀಸಾ ಸೇವೆ ನಿಲ್ಲಿಸಿದ ಭಾರತ

ಖಲಿಸ್ತಾನ​ ವಿಚಾರವಾಗಿ ಕೆನಡಾ ಮತ್ತು ಭಾರತದ ಮಧ್ಯೆ ಮನಸ್ತಾಪ ಉಂಟಾಗಿದ್ದು, ಇದೀಗ ಕೆನಡಿಯನ್ನರಿಗೆ ನೀಡಲಾಗುತ್ತಿದ್ದ ವೀಸಾವನ್ನು ಭಾರತ ತಡೆಹಿಡಿದಿದೆ.

ಕೆನಡಿಯನ್ನರಿಗೆ ವೀಸಾ ಸೇವೆ ನಿಲ್ಲಿಸಿದ ಭಾರತ
ಕೆನಡಿಯನ್ನರಿಗೆ ವೀಸಾ ಸೇವೆ ನಿಲ್ಲಿಸಿದ ಭಾರತ
author img

By PTI

Published : Sep 21, 2023, 2:06 PM IST

ನವದೆಹಲಿ: ಖಲಿಸ್ತಾನಿ ಉಗ್ರ ಹರ್​ದೀಪ್​ ಸಿಂಗ್ ನಿಜ್ಜರ್​ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂದು ಆರೋಪಿಸಿದ್ದ ಕೆನಡಾಗೆ ಕೇಂದ್ರ ಸರ್ಕಾರ ಮತ್ತೊಂದು ಭರ್ಜರಿ ಶಾಕ್​ ನೀಡಿದೆ. ಕೆನಡಿಯನ್ನರಿಗೆ ಭಾರತದ ವೀಸಾ ಸೇವೆ ಸ್ಥಗಿತಗೊಳಿಸಿ ಗುರುವಾರ ಆದೇಶಿಸಿದೆ. ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ತಲೆದೋರಿದ ಬೆನ್ನಲ್ಲೇ ಸರ್ಕಾರ ಈ ಕ್ರಮ ಜರುಗಿಸಿದೆ.

ಖಲಿಸ್ತಾನಿಗಳ ವಿಚಾರವಾಗಿ ಎರಡೂ ರಾಷ್ಟ್ರಗಳ ಮಧ್ಯೆ ತಿಕ್ಕಾಟ ನಡೆಯುತ್ತಿದ್ದು, ಭಾರತ ಸರ್ಕಾರ ಕೆನಡಿಯನ್ನರ ವೀಸಾ ಸ್ಥಗಿತಗೊಳಿಸಿದೆ. ಈ ಬಗ್ಗೆ ಕೆನಡಾದ ಖಾಸಗಿ ಏಜೆನ್ಸಿಯು ತನ್ನ ವೆಬ್​ಸೈಟ್​ನಲ್ಲಿ ಭಾರತೀಯ ವೀಸಾ ಸೇವೆಗಳನ್ನು 'ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಲಾಗಿದೆ' ಎಂದು ಬರೆದುಕೊಂಡಿದೆ.

ಭಾರತದ ಕ್ರಮಕ್ಕೆ ಕಾರಣವೇನು?: ಭಾರತದ ವಿರುದ್ಧ ಕೆನಡಾದಲ್ಲಿ ಪಿತೂರಿ ನಡೆಸುತ್ತಿರುವ ಖಲಿಸ್ತಾನಿಗಳಿಗೆ ಅಲ್ಲಿನ ಸರ್ಕಾರ ಬೆಂಬಲ ನೀಡುತ್ತಿದೆ. ಜೂನ್​ 29 ರಂದು ಖಲಿಸ್ತಾನಿ ಉಗ್ರ ಹರ್​ದೀಪ್​ ಸಿಂಗ್​ ನಿಜ್ಜರ್​ನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಈ ಹತ್ಯೆಯಲ್ಲಿ ಭಾರತದ ಏಜೆಂಟರು ಭಾಗಿಯಾಗಿದ್ದಾರೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ನೇರ ಆರೋಪ ಮಾಡಿದ್ದರು. ಬಳಿಕ ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ದೇಶದಿಂದ ಉಚ್ಚಾಟಿಸಿತ್ತು.

ಖಲಿಸ್ತಾನಿ ಉಗ್ರ ಹರ್​ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾದ ಆರೋಪವನ್ನು ಭಾರತ ಸರ್ಕಾರ ತಿರಸ್ಕರಿಸಿತ್ತು. ಇದು ಅಸಂಬದ್ಧ ಮತ್ತು ಪ್ರೇರಿತ ಆರೋಪ ಎಂದು ಜರಿದಿತ್ತು. ನಮ್ಮ ದೇಶ ಪ್ರಜಾಪ್ರಭುತ್ವದ ಕಾನೂನಾತ್ಮಕ ಆಳ್ವಿಕೆಗೆ ಒಳಪಟ್ಟ ಪ್ರಜಾಸತ್ತಾತ್ಮಕ ರಾಜಕೀಯವಾಗಿದೆ. ಉಗ್ರನ ಹತ್ಯೆಯಲ್ಲಿ ಭಾಗಿಯಾಗಿಲ್ಲ ಎಂದು ವಿದೇಶಾಂಗ ಇಲಾಖೆ ಹೇಳಿಕೆ ತಿರುಗೇಟು ನೀಡಿತ್ತು. ಇದಾದ ಕೆನಡಾ ಕೆನಡಾ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಯನ್ನು ಉಚ್ಚಾಟಿಸಿ ಪ್ರತೀಕಾರ ತೀರಿಸಿಕೊಂಡಿತ್ತು.

ತದನಂತರ, 'ತಾನು ಭಾರತದ ವಿರುದ್ಧ ಖಲಿಸ್ತಾನಿಗಳಿಗೆ ಪ್ರಚೋದನೆ ನೀಡುತ್ತಿಲ್ಲ. ಪ್ರಧಾನಿ ಮೋದಿ ಸರ್ಕಾರ ಖಲಿಸ್ತಾನಿ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು' ಎಂದು ಜಸ್ಟಿನ್​ ಟ್ರುಡೊ ಹೇಳಿಕೆ ನೀಡಿದ್ದರು. ನಾವು ಯಾರ ವಿರುದ್ಧವೂ ಯಾರನ್ನೂ ಎತ್ತಿಕಟ್ಟುತ್ತಿಲ್ಲ. ಖಲಿಸ್ತಾನಿಗಳ ಹೋರಾಟ ಹೆಚ್ಚಾಗಿದೆ. ಹೀಗಾಗಿ ಭಾರತ ಕೂಡ ಈ ಬಗ್ಗೆ ಗಂಭೀರವಾಗಿರಬೇಕು ಎಂದಿದ್ದರು.

ಎಚ್ಚರದಿಂದಲು ಸಲಹೆ: ಖಲಿಸ್ತಾನಿ ವಿಚಾರವಾಗಿ ಉಭಯ ರಾಷ್ಟ್ರಗಳ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ತಲೆದೋರಿದೆ. ಆ ದೇಶದಲ್ಲಿನ ಭಾರತೀಯ ನಾಗರಿಕರು ಎಚ್ಚರದಿಂದಿರಲು ಕೇಂದ್ರ ಸರ್ಕಾರ ಸಲಹೆ ನೀಡಿತ್ತು. ಭಾರತೀಯರು ಮತ್ತು ಸಂಸ್ಥೆಗಳ ಮೇಲೆ ಕೆನಡಾದಲ್ಲಿ ದಾಳಿ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಭಾರತೀಯ ವಿದ್ಯಾರ್ಥಿಗಳು, ನಾಗರಿಕರು ಹುಷಾರಾಗಿರಿ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೂಚಿಸಿದೆ.

ಅಲ್ಲಿನ ಸರ್ಕಾರದ ಆಶ್ರಯದಲ್ಲಿ ಭಾರತ ವಿರೋಧಿ ಚಟುವಟಿಕೆಗಳು, ದ್ವೇಷಪೂರಿತ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈ ಸಮಯದಲ್ಲಿ ಕೆನಡಾಕ್ಕೆ ಪ್ರಯಾಣಿಸಲು ಯೋಜಿಸುತ್ತಿರುವವರು ತಮ್ಮ ಪ್ರಯಾಣವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಲಾಗಿದೆ. ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಕೂಡ ಹೊರಡಿಸಿದೆ.

ಇದನ್ನೂ ಓದಿ: ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನ ಉಗ್ರನ ಹತ್ಯೆ: ದುಷ್ಕರ್ಮಿಗಳ ಗುಂಡೇಟಿಗೆ ಸುಖ್ದೂಲ್ ಸಿಂಗ್ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.