ನವದೆಹಲಿ: ದೇಶದಲ್ಲಿ ಮೂರನೇ ಹಂತದ ಕೋವಿಡ್ ಅಲೆ ಜೋರಾಗಿದ್ದು, ಪ್ರತಿದಿನ ಲಕ್ಷಾಂತರ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಇದೀಗ ಕೇಂದ್ರ ಆರೋಗ್ಯ ಇಲಾಖೆ ಕೋವಿಡ್ ನಿರ್ಮೂಲನೆಗೆ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ವರ್ಷದ ಮಾರ್ಚ್ ತಿಂಗಳಿಂದ 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ಆರಂಭಿಸಲಾಗುವುದು ಎಂದು ನೀತಿ ಆಯೋಗದ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ತಿಳಿಸಿದ್ದಾರೆ. ಖಾಸಗಿ ಸುದ್ದಿವಾಹಿನಿವೊಂದರಲ್ಲಿ ಮಾತನಾಡಿರುವ ಅವರು, 12 ವರ್ಷ ಮೆಲ್ಪಟ್ಟ ಮಕ್ಕಳಿಗೆ ವ್ಯಾಕ್ಸಿನೇಷನ್ ನೀಡಲು ಎಲ್ಲ ರೀತಿಯ ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದಿದ್ದಾರೆ. ಅರೋರಾ ಕೇಂದ್ರ ಸರ್ಕಾರದ ಕೋವಿಡ್-19 ಕಾರ್ಯಕಾರಿ ಗುಂಪಿನ ರಾಷ್ಟ್ರೀಯ ತಾಂತ್ರಿಕ ಸಲಹಾ ಅಧ್ಯಕ್ಷರಾಗಿಯೂ ಕೆಲಸ ಮಾಡ್ತಿದ್ದಾರೆ.
ಇದನ್ನೂ ಓದಿ: ಕೋಳಿ ಅಂಕದ ಜಾಗದಲ್ಲೇ Mobile ATM ಸೇವೆ; ಬ್ಯಾಂಕ್ ಸೌಕರ್ಯಕ್ಕೆ ಜೂಜಾಡುವವರು ಖುಷ್!
ಕಳೆದ ವರ್ಷ ಜನವರಿ 16ರಿಂದ ದೇಶದಲ್ಲಿ ಕೋವಿಡ್ ವ್ಯಾಕ್ಸಿನ್ ನೀಡುವ ಕಾರ್ಯ ಆರಂಭಿಸಲಾಗಿದ್ದು, ಒಂದು ವರ್ಷ ಮುಕ್ತಾಯಗೊಂಡಿದೆ. ಇಲ್ಲಿಯವರೆಗೆ ಒಟ್ಟು 157 ಕೋಟಿ ಡೋಸ್ ನೀಡಲಾಗಿದೆ.