ನವದೆಹಲಿ: ಕೊರೊನಾ ಎರಡನೇ ಅಲೆಗೆ ತತ್ತರಿಸಿರುವ ಭಾರತದಲ್ಲಿ ಇಂದಿನಿಂದ ಮೂರನೇ ಹಂತದ ವ್ಯಾಕ್ಸಿನೇಷನ್ ಡ್ರೈವ್ ಆರಂಭವಾಗುತ್ತಿದ್ದು, 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು.
3ನೇ ಹಂತದ ಲಸಿಕಾ ಅಭಿಯಾನಕ್ಕೆ ಈಗಾಗಲೇ 2.45 ಕೋಟಿಗೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಮಹಾರಾಷ್ಟ್ರ, ದೆಹಲಿ, ಮಧ್ಯಪ್ರದೇಶ ಸೇರಿದಂತೆ ಕೆಲ ರಾಜ್ಯಗಳು ಲಸಿಕೆಗಳ ಕೊರತೆಯಿಂದಾಗಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಆರಂಭಿಸುವುದಿಲ್ಲ ಎಂದು ಹೇಳಿವೆ.
ಇದನ್ನೂ ಓದಿ: ಇಂದು ರಷ್ಯಾದಿಂದ ಭಾರತಕ್ಕೆ ಬರಲಿದೆ 'ಸ್ಪುಟ್ನಿಕ್ ವಿ' ಲಸಿಕೆ
ಜನವರಿ 16 ರಿಂದ ದೇಶದಲ್ಲಿ ಲಸಿಕಾ ಅಭಿಯಾನ ಆರಂಭವಾಗಿತ್ತು. ಮೊದಲ ಎರಡು ಹಂತಗಳಲ್ಲಿ ಆರೋಗ್ಯ ಕಾರ್ಯಕರ್ತರು, ಕೋವಿಡ್ ವಿರುದ್ಧದ ಮುಂಚೂಣಿ ಕಾರ್ಮಿಕರು, 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿತ್ತು. ಇವರಿಗೆ ಕೂಡ ಲಸಿಕೆ ನೀಡುವುದನ್ನು ಕೇಂದ್ರ ಸರ್ಕಾರ ಮುಂದುವರಿಸಲಿದೆ.