ನವದೆಹಲಿ: ರಾಷ್ಟ್ರ ರಾಜಧಾನಿಯ ಪಂಚತಾರಾ ಹೋಟೆಲ್ನ ಕೋಣೆಯೊಂದರಲ್ಲಿ ಭಾರತೀಯ ಅಮೆರಿಕನ್ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ. ಈ ಕುರಿತು ನವದೆಹಲಿ ಜಿಲ್ಲೆಯ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನವದೆಹಲಿಯ ಡಿಸಿಪಿ ದೇವೇಶ್ ಕುಮಾರ್ ಮಹ್ಲಾ ಅವರ ಪ್ರಕಾರ, ಖಾಸಗಿ ಕಂಪನಿಯ ಸಿಇಒ ಒಬ್ಬರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಭಾರತೀಯ-ಅಮೆರಿಕನ್ ಮಹಿಳೆ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಲವಾರು ಆರೋಪಗಳನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಒಂದು ವರ್ಷದ ಹಿಂದೆ ದೆಹಲಿಯ ಪಂಚತಾರಾ ಹೋಟೆಲ್ನಲ್ಲಿ ಖಾಸಗಿ ಕಂಪನಿಯ ಸಿಇಒ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪ್ರಸ್ತುತ, ಪೊಲೀಸರು ಮಹಿಳೆಯ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ಸಂತ್ರಸ್ತೆ 42 ವರ್ಷದ ಮಹಿಳೆಯಾಗಿದ್ದು, ಈಕೆ ಸಿಇಒ ಜೊತೆ ಹೇಗೆ ಸಂಪರ್ಕಕ್ಕೆ ಬಂದಳು ಎಂಬ ಬಗ್ಗೆ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ದೇವೇಶ್ ಕುಮಾರ್ ಮಹ್ಲಾ ಮಾಹಿತಿ ನೀಡಿದ್ದಾರೆ.
ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಫುಲ್ವಾರಿ ಶರೀಫ್ ಪ್ರದೇಶದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭೇದಿಸಿರುವುದಾಗಿ ಪಾಟ್ನಾ ಪೊಲೀಸರು ಶುಕ್ರವಾರ ಹೇಳಿದ್ದಾರೆ. ಆರೋಪಿಯ ಕುಟುಂಬದ ಸುರಕ್ಷತೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಆತನ ಗುರುತನ್ನು ಬಹಿರಂಗಪಡಿಸುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಜನವರಿ 9ರಂದು ಇಬ್ಬರು ಬಾಲಕಿಯರ ಪೈಕಿ ಒಬ್ಬಳು ಹಿಂದೂನಿ ಗ್ರಾಮದ ಹೊಲದಲ್ಲಿ ಶವವಾಗಿ ಪತ್ತೆಯಾಗಿದ್ದರೆ, ಮತ್ತೊಬ್ಬಾಕೆ ಹತ್ತಿರದ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.
ಅತ್ಯಾಚಾರ ಆರೋಪಿಗೆ ಜಾಮೀನು: 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಮಹಾರಾಷ್ಟ್ರದ ವ್ಯಕ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದರೂ, ಆಕೆ ಸ್ವಯಂಪ್ರೇರಿತವಾಗಿ ಮನೆ ತೊರೆದು ಆರೋಪಿಯ ಜೊತೆ ವಾಸಿಸುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ ಎಂದು ನ್ಯಾಯಮೂರ್ತಿ ಊರ್ಮಿಳಾ ಜೋಶಿ-ಫಾಲ್ಕೆ ಹೇಳಿದ್ದಾರೆ.
2020ರ ಆಗಸ್ಟ್ನಲ್ಲಿ ಬಾಲಕಿಯ ತಂದೆ ಮಗಳು ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಪೊಲೀಸರು ಅವಳನ್ನು ಪತ್ತೆಹಚ್ಚಿದ ನಂತರ, ಆರೋಪಿಯೊಂದಿಗೆ ಸಂಬಂಧದಲ್ಲಿದ್ದ ಕಾರಣ ತಾನು ಸ್ವಇಚ್ಛೆಯಿಂದ ಮನೆ ತೊರೆದು ಆತನೊಂದಿಗೆ ಇದ್ದೆ ಎಂದು ಹೇಳಿದ್ದಾಳೆ.
ಇದನ್ನೂ ಓದಿ: ಹಾವೇರಿ ಅತ್ಯಾಚಾರ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ಬಂಧನ: ಎಸ್ಪಿ