ನವದೆಹಲಿ: ಭಾರತದ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಇಂದು ಪತನಗೊಂಡಿದೆ. ಅಪಘಾತದಲ್ಲಿ ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ. ಸೇನೆಯ ಏವಿಯೇಷನ್ ಹೆಲಿಕಾಪ್ಟರ್ ಬೆಳಗ್ಗೆ 10 ಗಂಟೆ ಸುಮಾರಿಗೆ ತವಾಂಗ್ ಬಳಿಯ ಮುಂಭಾಗದ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಸೇನಾ ಮೂಲಗಳು ಖಚಿತಪಡಿಸಿವೆ.
ಚೀತಾ ಹೆಲಿಕಾಪ್ಟರ್ ಇಬ್ಬರು ಪೈಲಟ್‌ಗಳೊಂದಿಗೆ ನಿಯಮಿತ ವಿಹಾರ ನಡೆಸುತ್ತಿತ್ತು. ಈ ವೇಳೆ ಹೆಲಿಕಾಪ್ಟರ್ ಪತನಗೊಂಡಿದೆ. ತಕ್ಷಣವೇ ಇಬ್ಬರು ಪೈಲಟ್ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ತೀವ್ರವಾಗಿ ಗಾಯಗೊಂಡಿದ್ದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಸೇನೆ ತಿಳಿಸಿದೆ. ಸಹ ಪೈಲಟ್ಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಈ ಅಪಘಾತಕ್ಕೆ ಕಾರಣ ಏನು ಎಂಬುದು ಇನ್ನೂವರೆಗೂ ತಿಳಿದುಬಂದಿಲ್ಲ. ವಿವರಗಳನ್ನು ಕಂಡುಹಿಡಿಯಲಾಗುತ್ತಿದೆ ಎಂದು ಸೇನಾ ಹೇಳಿಕೆ ತಿಳಿಸಲಾಗಿದೆ. ಕಳೆದ ವರ್ಷದ ಅಂತ್ಯದಲ್ಲಿ ಏರ್ ಫೋರ್ಸ್‌ನ ಎಂಐ-17 ವಿ5 ಹೆಲಿಕಾಪ್ಟರ್ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ದೇಶದ ಅತ್ಯು ನ್ನತ ರಕ್ಷಣಾ ಸಿಬ್ಬಂದಿ ಸಿಡಿಎಸ್ ಆಗಿದ್ದ ಜನರಲ್ ಬಿಪಿನ್ ರಾವತ್ ವೀರಮರಣವನ್ನಪ್ಪಿದ್ದರು.
ಇದನ್ನು ಓದಿ:ಮಾನವರನ್ನು ಹೊತ್ತೊಯ್ಯಬಲ್ಲ ಮೊದಲ ಸ್ವದೇಶಿ ಡ್ರೋನ್ 'ವರುಣಾ': ವಿಡಿಯೋ