ನವದೆಹಲಿ: ದ್ವಿಪಕ್ಷೀಯ ಮಿಲಿಟರಿ ಸಹಕಾರ ಸಂಬಂಧ ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆಸ್ಟ್ರೇಲಿಯಾದ ಪೀಟರ್ ಡಟನ್ ಮಾತುಕತೆ ನಡೆಸಿದ್ದಾರೆ.
ಸಿಂಗ್ ಮತ್ತು ಡಟನ್ ಇಬ್ಬರೂ ಕೂಡ ಈ ವೇಳೆ ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ರಕ್ಷಣಾ ಸಂಬಂಧಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಹಾಗೆ ವಿವಿಧ ದ್ವಿಪಕ್ಷೀಯ ರಕ್ಷಣಾ ಸಹಕಾರ ಉಪಕ್ರಮಗಳ ಪ್ರಗತಿ ಪರಿಶೀಲಿಸಿ ಸಶಸ್ತ್ರ ಪಡೆಗಳ ನಡುವಿನ ಒಪ್ಪಂದವನ್ನು ಮತ್ತಷ್ಟು ಹೆಚ್ಚಿಸಲು ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಹಕರಿಸಿದ ಆಸ್ಟ್ರೇಲಿಯಾಕ್ಕೆ ಸಿಂಗ್ ಧನ್ಯವಾದ ಅರ್ಪಿಸಿದ್ದಾರೆ. ಇಬ್ಬರ ಮಾತುಕತೆ ನಂತರ ಸಿಂಗ್ ಅವರು ಟ್ವೀಟ್ ಮಾಡಿದ್ದು, ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಎರಡೂ ದೇಶಗಳು ಕೈಗೊಂಡ ಕ್ರಮಗಳ ಬಗ್ಗೆ ಆಸ್ಟ್ರೇಲಿಯಾದ ರಕ್ಷಣಾ ಸಚಿವ ಪೀಟರ್ ಡಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಾಯಿತು ಎಂದಿದ್ದಾರೆ.