ನವದೆಹಲಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಹಿನ್ನೆಲೆಯಲ್ಲಿ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್ಗೆ ಸ್ಥಳಾಂತರ ಮಾಡಲಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ರವಿವಾರ ತಿಳಿಸಿದೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದೆ. ಈ ದೇಶದ ಪಶ್ಚಿಮ ಭಾಗಗಳಲ್ಲಿ ನಿರಂತರವಾದ ದಾಳಿಗಳು ನಡೆಯುತ್ತಿವೆ. ಇದರಿಂದ ಭದ್ರತೆ ವ್ಯವಸ್ಥೆ ಹದಗೆಡುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಪೋಲೆಂಡ್‌ನಲ್ಲಿ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ.
ಇದಕ್ಕೂ ಮುನ್ನ ಉಕ್ರೇನ್‌ನ ಸಂಘರ್ಷ ಸಂಬಂಧ ಭಾರತದ ಭದ್ರತಾ ಸನ್ನದ್ಧತೆ ಮತ್ತು ಜಾಗತಿಕ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆಯ ಸಂಪುಟ ಸಮಿತಿಯ ಸಭೆ ನಡೆದಿತ್ತು. ಉಕ್ರೇನ್‌ನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಿಸಲಾಗಿತ್ತು.
ಇದನ್ನೂ ಓದಿ: ನವೀನ್ ಪಾರ್ಥಿವ ಶರೀರ ತರಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಿ: ಅಧಿಕಾರಿಗಳಿಗೆ ಮೋದಿ ಸೂಚನೆ