ETV Bharat / bharat

ಬಿಜೆಪಿ-ಆರ್​ಎಸ್​ಎಸ್​ನ​ ಸಿದ್ಧಾಂತದಿಂದ ಯುವಕರು ಅಪರಾಧ ಎಸಗುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ - youth are succumbing to hatred

ಯುವಕರಲ್ಲಿ ದ್ವೇಷ ಭಾವನೆ ಹೆಚ್ಚಾಗುತ್ತಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ನಿರತರಾಗುವ ಬದಲು, ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕೈಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ದ್ವೇಷಕ್ಕೆ ಭಾರತೀಯ ಯುವಕರು ಬಲಿಯಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು..

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ

author img

By

Published : Jan 5, 2022, 4:28 PM IST

ನವದೆಹಲಿ : 'ಬುಲ್ಲಿ ಬಾಯಿ' ಆ್ಯಪ್‌ನ ಹಿಂದಿನ ಮಾಸ್ಟರ್‌ಮೈಂಡ್ ಎಂದು ಹೇಳಲಾದ 18 ವರ್ಷದ ಹುಡುಗಿಯನ್ನು ಮುಂಬೈ ಪೊಲೀಸ್ ತಂಡವು ಉತ್ತರಾಖಂಡದಲ್ಲಿ ಬಂಧಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಿದ್ಧಾಂತದಿಂದ 18 ರಿಂದ 21 ವರ್ಷದ ಯುವಕರು ಅಪರಾಧ ಎಸಗುತ್ತಿರುವುದು ಬೇಸರ ತಂದಿದೆ ಎಂದಿದ್ದಾರೆ.

ಯುವಕರಲ್ಲಿ ದ್ವೇಷ ಭಾವನೆ ಹೆಚ್ಚಾಗುತ್ತಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ನಿರತರಾಗುವ ಬದಲು, ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕೈಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ದ್ವೇಷಕ್ಕೆ ಭಾರತೀಯ ಯುವಕರು ಬಲಿಯಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ:'ಬುಲ್ಲಿ ಬಾಯಿ' ಆ್ಯಪ್‌ ಪ್ರಕರಣ; ಮುಂಬೈ ಸೈಬರ್‌ ಪೊಲೀಸರಿಂದ ಪ್ರಮುಖ ಆರೋಪಿ ಮಹಿಳೆ ಬಂಧನ

ಮುಂಬೈ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಉತ್ತರಾಖಂಡ್‌ನ ಇಬ್ಬರು ಮತ್ತು ಬೆಂಗಳೂರಿನ ಒಬ್ಬರನ್ನು ಬಂಧಿಸಿದ್ದಾರೆ.

ಬುಲ್ಲಿ ಬಾಯಿ ಅಪ್ಲಿಕೇಶನ್ (Bulli Bai App)ನಲ್ಲಿ ಟ್ವಿಟರ್‌ನ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಕದ್ದ ಅನೇಕ ಮಹಿಳೆಯರ ಫೋಟೋಗಳನ್ನು ಹಾಕಲಾಗಿದೆ. ಈ ಅಪ್ಲಿಕೇಶನ್‌ನಲ್ಲಿ ಮಹಿಳೆಯರ ಆನ್‌ಲೈನ್ ಬಿಡ್ಡಿಂಗ್ ಮಾಡಲಾಗುತ್ತದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.