ನವದೆಹಲಿ: ದೇಶದಲ್ಲಿ ಕಲ್ಲಿದ್ದಲು ಆಮದು ಶೇ.20.4 ರಷ್ಟು ಏರಿಕೆಯಾಗಿದ್ದು 19.92 ದಶಲಕ್ಷ ಟನ್‌ಗಳಿಗೆ ತಲುಪಿದೆ. ಕಳೆದ ಆರ್ಥಿಕ ವರ್ಷದಲ್ಲಿ ದೇಶವು 16.54 ಮೆಟ್ರಿಕ್ ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಂಡಿತ್ತು ಎಂದು ಎಂ-ಜಂಕ್ಷನ್ ಸರ್ವೀಸ್ ವರದಿಯಲ್ಲಿ ತಿಳಿಸಿದೆ. ಈ ವರ್ಷದಲ್ಲಿ ಕಲ್ಲಿದ್ದಲು ಆಮದು ಶೇಕಡಾ 20.4 ರಷ್ಟು ಏರಿಕೆಯಾಗಿದೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ ಎರಡು ತಿಂಗಳಲ್ಲಿ ಭಾರತದಲ್ಲಿ ಕಲ್ಲಿದ್ದಲು ಆಮದು ಶೇ.25.4 ರಷ್ಟು ಏರಿಕೆ ಕಂಡಿದ್ದು, 42.19 ಮೆಟ್ರಿಕ್ ಟನ್ಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ 33.63 ಮೆ.ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲಾಗಿತ್ತು.
ಮೇ ನಲ್ಲಿ 13.64 ಮೆ.ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲಾಗಿದ್ದು, ಕಳೆದ ಹಣಕಾಸು ವರ್ಷದಲ್ಲಿ ಮೇ ತಿಂಗಳವರೆಗೆ 10.54 ಮೆಟ್ರಿಕ್ ಟನ್ ಕಲ್ಲಿದ್ದಲನ್ನು ಮಾತ್ರ ಆಮದು ಮಾಡಿಕೊಳ್ಳಲಾಗಿತ್ತು. ಏಪ್ರಿಲ್- ಮೇ ತಿಂಗಳಲ್ಲಿ 22.82 ಮೆಟ್ರಿಕ್ ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲಾಗಿದ್ದು, ಈ ವರ್ಷ 28.96 ಮೆಟ್ರಿಕ್ ಆಮದು ಮಾಡಿಕೊಳ್ಳಲಾಗಿದೆ. ಈ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ 9 ಮೆಟ್ರಿಕ್ ಟನ್ಗಿಂತಲೂ ಹೆಚ್ಚು ಕಲ್ಲಿದ್ದಲನ್ನು ತರಿಸಿಕೊಳ್ಳಲಾಗಿದೆ.
ಮಾನ್ಸೂನ್ ಆರಂಭವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಲ್ಲಿದ್ದಲನ್ನು ಸಂಗ್ರಹಿಸಲಾಗುತ್ತಿದೆ. ಮಳೆಗಾಲದಲ್ಲಿ ಆಮದು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಎಂ-ಜಂಕ್ಷನ್ ಸರ್ವೀಸಸ್ ಎಂಡಿ ಮತ್ತು ಸಿಇಒ ವಿನಯಾ ವರ್ಮಾ ತಿಳಿಸಿದ್ದಾರೆ.