ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,22,315 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 3,02,544 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಮತ್ತು 4,454 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸದ್ಯ, ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,67,52,447 ಆಗಿದೆ. ಇದುವರೆಗೆ 2,37,28,011 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ ಒಟ್ಟು 3,03, 720 ಮಂದಿ ಮೃತಪಟ್ಟಿದ್ದು, ಸದ್ಯ, 27,20, 716 ಸಕ್ರಿಯ ಪ್ರಕರಣಗಳಿವೆ.
ಲಸಿಕೆ ಕೊರತೆಯ ನಡುವೆಯೂ ಉತ್ಪಾದನೆಯಾದಂತೆ ಲಸಿಕೆ ವಿತರಿಸುವ ಕಾರ್ಯ ನಡೆಯುತ್ತಿದೆ. ಇದುವರೆಗೆ ಒಟ್ಟು 19,60,51,962 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸಾವಿನ ಸಂಖ್ಯೆ ಏರಿಕೆ :
ಭಾನುವಾರ 2,40,842 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 3,55,102 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. 3,741 ಮಂದಿ ಸೋಂಕಿಗೆ ಬಲಿಯಾಗಿದ್ದರು. ಭಾನುವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಇಳಿಕೆ ಕಂಡಿದೆ. ಆದರೆ, ಮೃತಪಟ್ಟವರ ಸಂಖ್ಯೆ ಭಾರೀ ಏರಿಕೆಯಾಗಿದೆ.