ನವದೆಹಲಿ: ಕಳೆದ 200 ದಿನಗಳಿಂದ ಇದೇ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 18,795 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,36,97,581 ರಷ್ಟಾಗಿದೆ.
ಸಾವಿನ ಪ್ರಮಾಣವೂ ಕಡಿಮೆಯಾಗಿದ್ದು, ನಿನ್ನೆ ವೈರಸ್ಗೆ 179 ಮಂದಿ ಬಲಿಯಾಗಿದ್ದಾರೆ. ಈವರೆಗೆ 4,47,373 ಜನರು ಮೃತಪಟ್ಟಿದ್ದಾರೆ. ಕಳೆದ ದಿನ 26,030 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 32,9,58,002 ಜನರು ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ 2,92,206 ಕೋವಿಡ್ ಆ್ಯಕ್ಟಿವ್ ಕೇಸ್ಗಳಿವೆ.
ದೇಶದಲ್ಲಿ ವ್ಯಾಕ್ಸಿನೇಷನ್ ಬಿರುಸಿನಿಂದ ಸಾಗುತ್ತಿದ್ದು, ಸೆಪ್ಟೆಂಬರ್ 27 ರಂದು ಒಂದು ಕೋಟಿಗೂ ಅಧಿಕ (1,02,22,525) ವ್ಯಾಕ್ಸಿನ್ ಡೋಸ್ಗಳನ್ನು ನೀಡಲಾಗಿದೆ. ಈವರೆಗೆ 87,07,08,636 ಲಸಿಕಾ ಡೋಸ್ಗಳನ್ನು ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಕೋವಿಡ್ನಿಂದ ಪ್ರವಾಸೋದ್ಯಮ ಕುಂಠಿತಗೊಂಡಿದೆ : ಸಚಿವ ಆನಂದ್ ಸಿಂಗ್
ನಿನ್ನೆ 13,21,780 ಗಂಟಲು ದ್ರವ ಮಾದರಿಗಳನ್ನು ತಪಾಸಣೆ ಮಾಡಲಾಗಿದ್ದು, 56,57,30,031 ಸ್ವ್ಯಾಬ್ ಟೆಸ್ಟ್ ಮಾಡಲಾಗಿದೆ ಅಂತಾ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮಾಹಿತಿ ನೀಡಿದೆ.