ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ ಕೇವಲ 10 ಸಾವಿರಕ್ಕಿಂತ ಕಡಿಮೆ ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ ದೇಶದಲ್ಲಿ 8,013 ಮಂದಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಮಹಾಮಾರಿ ಸೋಂಕಿಗೆ 119 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,13,843 ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ 1,02,601 ಸಕ್ರಿಯ ಪ್ರಕರಣಗಳಿವೆ.
ನಿನ್ನೆ 16,765 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,23,07,686 ಕ್ಕೆ ಏರಿಕೆಯಾಗಿದೆ. ಜೊತೆಗೆ ದೈನಂದಿನ ಪಾಸಿಟಿವಿಟಿ ದರ 1.11% ಇದೆ.
ವ್ಯಾಕ್ಸಿನೇಷನ್ ವಿವರ: ಈವರೆಗೆ ದೇಶದಲ್ಲಿ ಸುಮಾರು 1,77,50,86,335 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.