ಡಾಕಾ(ಬಾಂಗ್ಲಾದೇಶ): ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧವು ವಿಶೇಷ ಮತ್ತು ವಿಭಿನ್ನವಾಗಿದೆ. ಭಾರತ ಮತ್ತು ಬಾಂಗ್ಲಾದ ಸಂಬಂಧವನ್ನು ಯಾವುದೇ ರಾಷ್ಟ್ರದೊಂದಿಗೆ ಹೋಲಿಕೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅಭಿಪ್ರಾಯಪಟ್ಟಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಸ್ಪಷ್ಟನೆ ನೀಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬಾಂಗ್ಲಾದೇಶ ಪ್ರವಾಸ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಹರ್ಷವರ್ಧನ್ ಶ್ರಿಂಗ್ಲಾ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಬಾಂಗ್ಲಾದೇಶದ ರಾಷ್ಟ್ರಪತಿ ಎಂ.ಅಬ್ದುಲ್ ಹಮೀದ್ ಅವರ ಮಾತುಕತೆಗಳ ನಡುವಿನ ಸಾರಾಂಶವನ್ನು ಬಿಚ್ಚಿಟ್ಟಿದ್ದಾರೆ.
ಬಾಂಗ್ಲಾದೇಶದ ರಾಷ್ಟ್ರಪತಿ ಎಂ.ಅಬ್ದುಲ್ ಹಮೀದ್ ಭೇಟಿಯ ವೇಳೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧವು ವಿಶೇಷ ಮತ್ತು ವಿಭಿನ್ನವಾಗಿದೆ ಎಂದಿದ್ದಾರೆ ಎಂದು ಶ್ರೀಂಗ್ಲಾ ಸ್ಪಷ್ಟನೆ ನೀಡಿದ್ದಾರೆ.
ಅಷ್ಟೇ ಅಲ್ಲದೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಅವರನ್ನು ರಾಷ್ಟ್ರಪತಿ ಕೋವಿಂದ್ ಅವರು ಪ್ರತ್ಯೇಕವಾಗಿ ಭೇಟಿ ಮಾಡಿ, ದ್ವಿಪಕ್ಷೀಯ ಸಂಬಂಧಗಳ ವೃದ್ಧಿ ಮತ್ತು ಹಲವಾರು ಕ್ಷೇತ್ರಗಳಲ್ಲಿ ಉಭಯ ದೇಶಗಳು ಹೇಗೆ ಪರಸ್ಪರ ಲಾಭವನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಹಾಗೆಯೇ ಬಾಂಗ್ಲಾದೇಶವು ಯುನೈಟೆಡ್ ಸ್ಟೇಟ್ಸ್, ಭಾರತ, ಜಪಾನ್ ಮತ್ತು ಆಸ್ಟ್ರೇಲಿಯಾದ ಕ್ವಾಡ್ ಒಕ್ಕೂಟವನ್ನು ಸೇರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು 'ಇದು ಬಾಂಗ್ಲಾದೇಶದ ಸಾರ್ವಭೌಮ ನಿರ್ಧಾರ' ಎಂದು ಎಂದು ಶ್ರಿಂಗ್ಲಾ ಹೇಳಿದ್ದಾರೆ.
ರೊಹಿಂಗ್ಯಾ ಸಮಸ್ಯೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರಿಂಗ್ಲಾ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಎರಡರೊಂದಿಗೂ ಸಾಮಾನ್ಯ ಭೂ ಗಡಿಯನ್ನು ಹಂಚಿಕೊಳ್ಳುವ ಏಕೈಕ ದೇಶ ಭಾರತ ಎಂದಿದ್ದು, ಮೂರೂ ದೇಶಗಳು ಈ ಸಮಸ್ಯೆಯನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿವೆ ಎಂದಿದ್ದಾರೆ.
ಇದನ್ನೂ ಓದಿ: 1971ರ ಭಾರತ-ಪಾಕ್ ಯುದ್ಧ: ಭಾರತೀಯ ಸೇನೆಯ ಪರಾಕ್ರಮದ ಅನಾವರಣ