ETV Bharat / bharat

ಇಂದೋರ್ ದೇವಾಲಯದ ಮೆಟ್ಟಿಲುಬಾವಿ ಕುಸಿತ: ಮೃತರ ಸಂಖ್ಯೆ 35ಕ್ಕೆ ಏರಿಕೆ - ಮಧ್ಯಪ್ರದೇಶ

ಇಂದೋರ್ ದೇವಸ್ಥಾನದ ಮೆಟ್ಟಿಲುಬಾವಿ ಗುರುವಾರ (ನಿನ್ನೆ) ಕುಸಿದಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

Indore Temple Stepwell Collapse
ರಕ್ಷಣಾ ಕಾರ್ಯಾಚರಣೆ
author img

By

Published : Mar 31, 2023, 9:09 AM IST

ಇಂದೋರ್ (ಮಧ್ಯಪ್ರದೇಶ): ಇಂದೋರ್ ದೇವಾಲಯದ ಮೆಟ್ಟಿಲುಬಾವಿ ಕುಸಿದ ಘಟನೆಯಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಇಂದೋರ್ ಜಿಲ್ಲಾಧಿಕಾರಿ ಡಾ.ಇಳಯರಾಜ ಟಿ. ಇಂದು(ಶುಕ್ರವಾರ) ತಿಳಿಸಿದ್ದಾರೆ. "ಒಟ್ಟು 35 ಮಂದಿ ಸಾವನ್ನಪ್ಪಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. ಮತ್ತು 14 ಜನರನ್ನು ರಕ್ಷಿಸಲಾಗಿದೆ. ಇಬ್ಬರು ಚಿಕಿತ್ಸೆ ಪಡೆದ ನಂತರ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ" ಎಂದು ಅವರು ಮಾಹಿತಿ ನೀಡಿದರು.

ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ. 18 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆಯು ಗುರುವಾರ ಸುಮಾರು 12:30ಕ್ಕೆ ಪ್ರಾರಂಭವಾಗಿದ್ದು, ಇನ್ನೂ ಮುಂದುವರೆದಿದೆ. ಮಧ್ಯಪ್ರದೇಶ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ತುರ್ತು ಮತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಇಆರ್‌ಎಫ್) ಮತ್ತು ಜಿಲ್ಲಾಡಳಿತದ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

  • Stepwell collapse at Indore temple | Death toll rises to 35

    18 people were admitted to the hospital, out of which 2 people have been discharged. 35 people died. One person is still missing. Army, NDRF & SDRF teams are conducting search & rescue operation: Indore Collector Dr… pic.twitter.com/3Ff6VzAkXs

    — ANI MP/CG/Rajasthan (@ANI_MP_CG_RJ) March 31, 2023 " class="align-text-top noRightClick twitterSection" data=" ">

ಪ್ರಕರಣದ ವಿವರ: ಅಧಿಕಾರಿಗಳ ಪ್ರಕಾರ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಜತೆಗೆ 75 ಸೇನಾ ಸಿಬ್ಬಂದಿಯ ತಂಡ ರಕ್ಷಣೆಯಲ್ಲಿ ತೊಡಗಿದೆ. ರಾಮನವಮಿಯಂದು ಪಟೇಲ್ ನಗರ ಪ್ರದೇಶದ ಬೇಲೇಶ್ವರ ಮಹಾದೇವ ಝೂಲೇಲಾಲ್ ದೇವಸ್ಥಾನದಲ್ಲಿ ಆಯೋಜಿಸಿದ್ದ ಹವನದ ವೇಳೆ ಅವಘಡ ಸಂಭವಿಸಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ. ಪ್ರಧಾನಮಂತ್ರಿ ಪರಿಹಾರ ನಿಧಿಯ ಮೂಲಕ ₹2 ಲಕ್ಷ ಹೆಚ್ಚುವರಿಯಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.

ಪ್ರಧಾನಿ ಕಳವಳ: "ಇಂದೋರ್‌ನಲ್ಲಿ ಸಂಭವಿಸಿದ ಘಟನೆಯಿಂದ ನೋವಾಗಿದೆ. ಮುಖ್ಯಮಂತ್ರಿ ಶಿವರಾಜ್‌ ಚೌಹಾಣ್ ಅವರೊಂದಿಗೆ ಮಾತನಾಡಿ, ಅಲ್ಲಿನ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದೇನೆ. ರಾಜ್ಯ ಸರ್ಕಾರ ಕ್ಷಿಪ್ರವಾಗಿ ರಕ್ಷಣಾ ಕಾರ್ಯ ಕೈಗೆತ್ತಿಕೊಂಡಿದೆ. ಸಂತ್ರಸ್ತರು ಹಾಗೂ ಅವರ ಕುಟುಂಬಗಳ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

30–35 ಮಂದಿ ಬಾವಿಯೊಳಗೆ ಬಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ನೀಡಿರುವ ಹೇಳಿಕೆ ಉಲ್ಲೇಖಿಸಿ ಪೊಲೀಸ್‌ ಕಮಿಷನರ್ ಮಕರಂದ್ ದೇವಸ್ಕರ್‌ ವಿವರ ನೀಡಿದರು. "ಹವನ ಸೇರಿದಂತೆ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದ್ದವು. ಆಗ ಬಾವಿಯ ಮೇಲೆ ಭಾರಿ ಜನರು ಜಮಾಯಿಸಿದ್ದರು. ಜನರ ಭಾರದಿಂದಾಗಿ ಚಾವಣಿ ಕುಸಿಯಿತು" ಎಂದು ಘಟನೆಯನ್ನು ವಿವರಿಸಿದರು.

ದೇಗುಲದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಶರ್ಮಾ ಮಾತನಾಡಿ, ಯಾವುದೇ ಕಾಂಕ್ರೀಟ್ ಆಧಾರವಿಲ್ಲದೆ ಕಲ್ಲಿನ ಚಪ್ಪಡಿಗಳನ್ನು ಹಾಕಿ ಕಾಂಕ್ರೀಟ್ ಹಾಗೂ ಕಬ್ಬಿಣದ ಸರಳುಗಳನ್ನು ಅಳವಡಿಸಿ ಛಾವಣಿ ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ. ಪುರಾತನ ಬಾವಿಯ ಮೇಲೆ ಸ್ಲ್ಯಾಬ್ ನಿರ್ಮಾಣಕ್ಕೆ ಜಿಲ್ಲಾಡಳಿತ ಹೇಗೆ ಅನುಮತಿ ನೀಡಿತು ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

ಇದನ್ನೂ ಓದಿ: ದೇವಸ್ಥಾನದಲ್ಲಿ ಬಾವಿಯ ಮೇಲ್ಛಾವಣಿ ಕುಸಿತ: ಮಹಿಳೆಯರು ಸೇರಿ ಐವರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.