ಮುಂಬೈ(ಮಹಾರಾಷ್ಟ್ರ): ದೇಶದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ್ದ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಹೊಸದೊಂದು ಟ್ವಿಸ್ಟ್ ಕೇಳಿಬರುತ್ತಿದೆ. ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಇಂದ್ರಾಣಿ ಮುಖರ್ಜಿ ಸಿಬಿಐಗೆ ಬರೆದಿರುವ ಪತ್ರವೊಂದು ಹೊಸ ಟ್ವಿಸ್ಟ್ಗೆ ಕಾರಣವಾಗಿದೆ.
ಶೀನಾ ಬೋರಾ ಕಾಶ್ಮೀರದಲ್ಲಿ ಜೀವಂತವಾಗಿದ್ದಾರೆ ಎಂದು ಸಿಬಿಐಗೆ ಇಂದ್ರಾಣಿ ಮುಖರ್ಜಿ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೆ, ಕಾಶ್ಮೀರದಲ್ಲಿ ಮಹಿಳೆಯೊಬ್ಬರು ಶೀನಾ ಬೋರಾಳನ್ನು ನೋಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.
ಇದರ ಜೊತೆಗೆ ಶೀನಾ ಬೋರಾ ಅವರನ್ನು ಪತ್ತೆ ಮಾಡಬೇಕೆಂದು ಸಿಬಿಐಗೆ ಇಂದ್ರಾಣಿ ಮುಖರ್ಜಿ ಮನವಿ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಅಂದಹಾಗೆ ಶೀನಾ ಬೋರಾ ಕೊಲೆ ಪ್ರಕರಣ 2012ರಲ್ಲಿ ನಡೆದಿದ್ದು, ಇಂದ್ರಾಣಿ ಮುಖರ್ಜಿ ಶೀನಾ ಬೋರಾಳ ತಾಯಿ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದಾರೆ.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ.. ಗೋವಾ ಸಚಿವ ಮಿಲಿಂದ್ ನಾಯ್ಕ್ ರಾಜೀನಾಮೆ