ಉರಿ(ಜಮ್ಮು ಕಾಶ್ಮೀರ): ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಯತ್ನಿಸಿದ ಓರ್ವ ವ್ಯಕ್ತಿಯನ್ನು ಸೇನೆ ಕೊಂದಿದ್ದು, ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರಿಗೆ ಗಾಯಗಳಾಗಿವೆ ಎಂದು ಜಮ್ಮು ಕಾಶ್ಮೀರದ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಬಾರಾಮುಲ್ಲಾ ಜಿಲ್ಲೆಯ ಉರಿಯ ಗೋಹಲನ್ ವಲಯದಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ಮೃತದೇಹದೊಂದಿಗೆ ಒಂದು ಎಕೆ - 47 ರೈಫಲ್ ಮತ್ತು ನಾಲ್ಕು ಮ್ಯಾಗಜೀನ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕಳೆದ ವಾರ ಈ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೇನೆ ಕಾರ್ಯಾಚರಣೆ ಕೈಗೊಂಡಿತ್ತು. ಈಗ ಓರ್ವವನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇತ್ತೀಚೆಗೆ ಉರಿಯ ರಾಮಪುರ ವಲಯದಲ್ಲಿ ಕನಿಷ್ಠ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅವರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಗ ಹತ್ಯೆಯಾದ ವ್ಯಕ್ತಿಯ ಮೃತದೇಹವನ್ನು ಉರಿ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
ಇದನ್ನೂ ಓದಿ: ಸಾಲು ಸಾಲು ಹಬ್ಬಗಳ ಸಮಯದಲ್ಲೂ ಚಿನ್ನದ ದರ ಕಡಿಮೆ ಸಾಧ್ಯತೆ.. ಕಾರಣ?