ನವದೆಹಲಿ: 40 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಇತರ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ನೀಡುವಂತೆ ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ಶಿಫಾರಸು ಮಾಡಿದೆ.
ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ INSACOG, ಇನ್ನೂ ಲಸಿಕೆ ಹಾಕಿಸಿಕೊಳ್ಳದವರಿಗೆ ತ್ವರಿತವಾಗಿ ವ್ಯಾಕ್ಸಿನ್ ನೀಡಬೇಕಿದೆ. ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರಿಗೆ ಪ್ರಸ್ತುತ ಲಸಿಕೆಗಳು ಕಡಿಮೆ ಮಟ್ಟದ ಪ್ರತಿಕಾಯಗಳನ್ನು ಉತ್ಪಾದಿಸಬಹುದು. ಹೀಗಾಗಿ 40 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಬೂಸ್ಟರ್ ಡೋಸ್ ನೀಡಿದರೆ ಇದು ಒಮಿಕ್ರಾನ್ ವಿರುದ್ಧ ಹೋರಾಡಲೂ ಸಹಕಾರಿಯಾಗುತ್ತದೆ ಎಂದು ತಿಳಿಸಿದೆ.
ಇದನ್ನೂ ಓದಿ: ಬೂಸ್ಟರ್ ಡೋಸ್ ನೀಡಲು ಕೋವಿಶೀಲ್ಡ್ಗೆ ಅನುಮತಿ ನೀಡಿ: ಸೀರಂ ಸಂಸ್ಥೆಯಿಂದ ಡಿಸಿಜಿಐಗೆ ಪತ್ರ
ನಿನ್ನೆ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗುತ್ತಿದ್ದಂತೆಯೇ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ದೇಶದಲ್ಲಿ ಸಾಕಷ್ಟು ಲಸಿಕೆಯಿದ್ದು, ತಮ್ಮ ಕೋವಿಶೀಲ್ಡ್ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ನೀಡಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಅನುಮೋದನೆಯನ್ನು ಕೋರಿದೆ.