ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪವನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಉನ್ನತ ಮೂಲಗಳು ಪ್ರಿಯಾಂಕಾ ವಾದ್ರಾ ಅವರ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳು ಹ್ಯಾಕ್ ಆಗಿಲ್ಲ ಎಂದು ಸ್ಪಷ್ಟಪಡಿಸಿವೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳು ಹ್ಯಾಕ್ ಆಗಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಹೇಳಿವೆ.
ಇತ್ತೀಚೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಮಕ್ಕಳ ಇನ್ಸ್ಟಾ ಖಾತೆಗಳನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡುತ್ತಿದೆ ಎಂದು ಆರೋಪ ಮಾಡಿದ್ದರು. ಇದನ್ನು ಗಮನಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
ತಮ್ಮ ಮಕ್ಕಳ ಇನ್ಸ್ಟಾ ಖಾತೆ ಹ್ಯಾಕ್ ಆಗಿರುವ ಬಗ್ಗೆ ಪ್ರಿಯಾಂಕಾ ಗಾಂಧಿ ವಾದ್ರಾ ದೂರು ಸಲ್ಲಿಸಿಲ್ಲ. ಆದರೆ ಸರ್ಕಾರ ಈ ವಿಷಯವನ್ನು ಗಮನಕ್ಕೆ ತೆಗೆದುಕೊಂಡಿದ್ದು, ಸ್ವಯಂ ತನಿಖೆ ನಡೆಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ಉತ್ತರ ಪ್ರದೇಶದ ಮಾತನಾಡಿದ್ದ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರಕ್ಕೆ ಬೇರೆ ಕೆಲಸವಿಲ್ಲವೇ?, ಫೋನ್ ಕದ್ದಾಲಿಕೆ ಮಾಡುವುದು, ನನ್ನ ಮಕ್ಕಳ ಇನ್ಸ್ಟಾ ಖಾತೆಯನ್ನು ಹ್ಯಾಕ್ ಮಾಡುವುದೇ ಕೆಲಸ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: 5 ಕೆಜಿ ತೂಕದ ಐಇಡಿ ಪತ್ತೆ ಹಚ್ಚಿ, ಉಗ್ರರ ಸಂಚು ವಿಫಲಗೊಳಿಸಿದ ಭದ್ರತಾ ಪಡೆ