ನವದೆಹಲಿ: ಕೋವಿಡ್‌ನಿಂದ ನಿರ್ಬಂಧಿಸಲಾಗಿದ್ದ ಅಂತಾರಾಷ್ಟ್ರೀಯ ವಿಮಾನ ಸೇವೆ ಮಾರ್ಚ್ 27 ರಿಂದ ಪುನಾರಂಭವಾಗಲಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಸತತವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
2020ರ ಮಾರ್ಚ್ 23 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸೇವೆ ಸ್ಥಗಿತಗೊಳಿಸಲಾಗಿತ್ತು. ಈ ಅವಧಿಯಲ್ಲಿ ಏರ್ ಬಬಲ್‌ನಲ್ಲಿ ಭಾರತದಿಂದ 35 ವಿದೇಶಗಳಿಗೆ ವಿಶೇಷ ವಿಮಾನಗಳು ಹಾಗೂ ಕಾರ್ಗೊ ವಿಮಾನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಾಗರಿಕರು ಪ್ರಯಾಣಿಸುವ ವಿದೇಶಿ ವಿಮಾನಗಳ ಹಾರಾಟಕ್ಕೆ ಹಸಿರು ನಿಶಾನೆ ಸಿಕ್ಕಿದೆ.
ವಿಮಾನ ಸೇವೆ ಆರಂಭವಾದರೂ ಪ್ರಯಾಣಿಕರು ಕೇಂದ್ರ ಆರೋಗ್ಯ ಸಚಿವಾಲಯದ ಎಲ್ಲಾ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ವಿಮಾನಯಾನ ಸಚಿವಾಲಯ ಹೇಳಿದೆ.
ಇದನ್ನೂ ಓದಿ: Omicron: 2022ರ ಜನವರಿ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ರದ್ದು