ಲಖನೌ(ಉತ್ತರ ಪ್ರದೇಶ): ಸಂಘರ್ಷಪೀಡಿತ ಲಖಿಂಪುರ್ ಖೇರಿ ಮತ್ತು ಸೀತಾಪುರದಲ್ಲಿ ಬುಧವಾರ ಕೆಲವು ಕಾಂಗ್ರೆಸ್ ನಾಯಕರು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ಹೊರಟಿದ್ದಾರೆ ಎಂಬ ಮಾಹಿತಿಯ ಬೆನ್ನಲ್ಲೇ ಆ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಸೀತಾಪುರ ಮತ್ತು ಲಖಿಂಪುರ್ ಪ್ರದೇಶಗಳಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸುವ ಎಲ್ಲಾ ಪ್ರಯತ್ನಗಳನ್ನು ನಾವು ವಿಫಲಗೊಳಿಸುತ್ತೇವೆ. ಅಂತರ್ಜಾಲ ಸೇವೆಯನ್ನು ಸ್ಥಗಿತ ಮಾಡಲಾಗಿದ್ದು, ಸಂಜೆಯೊಳಗೆ ಯಾವುದೇ ಅಹಿತಕರ ಘಟನೆ ನಡೆಯದಿದ್ದರೆ, ಅಂತರ್ಜಾಲ ಸೇವೆಗಳನ್ನು ನೀಡುವ ಸಾಧ್ಯತೆಯಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಿಯಾಂಕಾ ಅವರನ್ನು ಭೇಟಿ ಮಾಡಲು ಲಖನೌ ಮತ್ತು ನಂತರ ಸೀತಾಪುರಕ್ಕೆ ಬರಲು ನಿರ್ಧರಿಸಿದ್ದರು. ಆದರೆ ಪೊಲೀಸ್ ಇಲಾಖೆ ರಾಹುಲ್ ಗಾಂಧಿ ಅವರಿಗೆ ಅನುಮತಿ ನೀಡಿರಲಿಲ್ಲ.
ಈ ಮೊದಲು ಲಖಿಂಪುರ ಜಿಲ್ಲಾಡಳಿತವು ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಿತ್ತು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿತ್ತು. ಈಗ ಸೀತಾಪುರದಲ್ಲಿಯೂ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ: ಡ್ರಗ್ಸ್ ಖರೀದಿಗೆ ಕ್ರಿಪ್ಟೋ ಕರೆನ್ಸಿ ಬಳಸುತ್ತಿದ್ದ ಶಾರುಖ್ ಖಾನ್ ಪುತ್ರ: ಎನ್ಸಿಬಿ