ಮುಂಬೈ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತು ಸಾರಿಗೆ ಸಚಿವ ಅನಿಲ್ ಪರಬ್ ಅವರ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.
ಸಚಿನ್ ವಾಜೆ ಪ್ರಕರಣ ಸಂಬಂಧಿಸಿ ಚಂದ್ರಕಾಂತ್ ಪಾಟೀಲ್ ಗೃಹ ಸಚಿವರಿಗೆ ಪತ್ರ ಬರೆದಿದ್ದು, ಅನೇಕ ವಿಷಯಗಳನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು 2004 ರಲ್ಲಿ ಸಚಿನ್ ವಾಜೆ ಅವರನ್ನು ಇಲಾಖೆಯಿಂದ ಅಮಾನತುಗೊಳಿಸಲಾಗಿತ್ತು. ಆದರೆ, 2020 ರಲ್ಲಿ ಎಂವಿಎ ಸರ್ಕಾರವು ಅವರನ್ನು ಮತ್ತೆ ಪೊಲೀಸ್ ಅಧಿಕಾರಿಯಾಗಿ ನೇಮಿಸಿತು ಎಂದು ಆರೋಪಿಸಿದ್ದಾರೆ.
ಅಕ್ರಮ ಗುಟ್ಕಾ ಮಾರಾಟಗಾರರು ಮತ್ತು ನಿರ್ಮಾಪಕರಿಂದ 100 ಕೋಟಿ ರೂ.ಗಳನ್ನು ವಸೂಲಿ ಮಾಡಬೇಕು ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೂಚಿಸಿದ್ದಾರೆ. ಜೊತೆಗೆ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಗುತ್ತಿಗೆದಾರರಿಂದ 2 ಕೋಟಿ ರೂ. ವಸೂಲಿ ಮಾಡಬೇಕು ಎಂದು ಸಾರಿಗೆ ಸಚಿವ ಅನಿಲ್ ಪರಬ್ ಹೇಳಿದ್ದಾರೆ ಎಂದು ವಿಚಾರಣೆ ಸಂದರ್ಭದಲ್ಲಿ ವಾಜೆ ಬಹಿರಂಗಪಡಿಸಿದ್ದಾರೆ ಎಂದು ಪಾಟೀಲ್ ಪತ್ರದಲ್ಲಿ ಬರೆದಿದ್ದಾರೆ.