ಮುಂಬೈ: ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಬಿಎಸ್ವೈ ಅವರೊಂದಿಗೆ ಶನಿವಾರ ಬೆಳಗ್ಗೆ 10.30ಕ್ಕೆ ಸಭೆ ನಡೆಸಲಾಗುತ್ತದೆ ಎಂದು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಈ ಮೊದಲು ಎರಡೂ ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು, ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿತ್ತು.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳ
ಸಿಎಂ ಅವರೊಂದಿಗೆ ಸಭೆ ನಡೆಯಲಿದ್ದು, ಕೃಷ್ಣಾ ನದಿಯ ಅಕ್ಕಪಕ್ಕದಲ್ಲಿ, ಆಲಮಟ್ಟಿ ಆಣೆಕಟ್ಟಿಗೆ ಸಮೀಪದಲ್ಲಿರುವ ಜನರನ್ನು ಪ್ರವಾಹ ಪರಿಸ್ಥಿತಿ ಎದುರಾದರೆ ಯಾವ ರೀತಿ ರಕ್ಷಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.