ETV Bharat / bharat

ಮಹಾರಾಷ್ಟ್ರ ಭೂಕುಸಿತ: ರಕ್ಷಣಾ ಕಾರ್ಯಾಚರಣೆ ಸ್ಥಗಿತ; ಇನ್ನೂ 57 ಮಂದಿ ನಾಪತ್ತೆ - ಎನ್‌ಡಿಆರ್‌ಎಫ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲವಾಡಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ಭಾನುವಾರ ತನ್ನ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಹಿಂಪಡೆದುಕೊಂಡಿದೆ ಎಂದು ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.

Maha landslide
ಮಹಾರಾಷ್ಟ್ರ ಭೂಕುಸಿತ
author img

By

Published : Jul 24, 2023, 7:22 AM IST

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲವಾಡಿಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭೂಕುಸಿತಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್‌ಡಿಆರ್‌ಎಫ್‌) ತನ್ನ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಭಾನುವಾರ ಸ್ಥಗಿತಗೊಳಿಸಿದೆ. ಈ ಕುರಿತು ರಾಜ್ಯ ಸಚಿವ ಉದಯ್ ಸಾಮಂತ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, "ಜಿಲ್ಲಾಡಳಿತ, ಇತರೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಚರ್ಚಿಸಿದ ನಂತರ ಎನ್‌ಡಿಆರ್‌ಎಫ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಹಿಂಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದುವರೆಗೆ 27 ಮೃತದೇಹಗಳು ಪತ್ತೆಯಾಗಿವೆ. ಇನ್ನೂ 57 ಮಂದಿ ನಾಪತ್ತೆಯಾಗಿದ್ದಾರೆ. ಒಂದು ಶವವನ್ನು ಮಾತ್ರ ಗುರುತಿಸಲಾಗಿಲ್ಲ. ಭಾನುವಾರ ಅವಶೇಷಗಳಿಂದ ಯಾವುದೇ ಮೃತದೇಹ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ 12 ಪುರುಷರು, 10 ಮಹಿಳೆಯರು ಮತ್ತು 4 ಚಿಕ್ಕ ಮಕ್ಕಳು ಸೇರಿದ್ದಾರೆ. ಕಾಣೆಯಾದವರು ಮತ್ತು ಪ್ರಾಣ ಕಳೆದುಕೊಂಡ ವಿವರಗಳನ್ನು ಸ್ಥಳೀಯ ಆಡಳಿತದಿಂದ ಪಡೆಯಬಹುದು" ಎಂದರು.

"ಎನ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ 1,100ಕ್ಕೂ ಹೆಚ್ಚು ಜನರು ನಾಲ್ಕು ದಿನಗಳ ಕಾಲ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜನರ ಓಡಾಟವನ್ನು ನಿರ್ಬಂಧಿಸುವ ಸಲುವಾಗಿ ಸಿಆರ್‌ಪಿಸಿ ಸೆಕ್ಷನ್ 144 (ನಿಷೇಧಾಜ್ಞೆ) ಜಾರಿಗೊಳಿಸಿರುವುದರಿಂದ ಆ ಸ್ಥಳದಲ್ಲಿ ಯಾರೂ ಓಡಾಡಬಾರದು. ಗ್ರಾಮದಲ್ಲಿ 228 ಜನರಿದ್ದು, ಅದರಲ್ಲಿ 57 ಮಂದಿ ಇನ್ನೂ ಪತ್ತೆಯಾಗಿಲ್ಲ, 27 ಜನರ ಮೃತದೇಹಗಳು ಪತ್ತೆಯಾಗಿವೆ. ಕುಗ್ರಾಮದ 43 ಕುಟುಂಬಗಳಲ್ಲಿ ಎರಡು ಕುಟುಂಬಗಳು ಸಂಪೂರ್ಣವಾಗಿ ಸಾವನ್ನಪ್ಪಿವೆ, 144 ಜನರನ್ನು ಒಳಗೊಂಡ 41 ಕುಟುಂಬಗಳಿಗೆ ದೇವಸ್ಥಾನದಲ್ಲಿ ಆಶ್ರಯ ನೀಡಲಾಗಿದೆ" ಎಂದು ವಿವರ ಒದಗಿಸಿದರು.

ಭೂಕುಸಿತದಲ್ಲಿ 17 ಮನೆಗಳು ಸಮಾಧಿ : ಮುಂಬೈನಿಂದ 80 ಕಿ.ಮೀ ದೂರದಲ್ಲಿರುವ ದೂರದ ಬುಡಕಟ್ಟು ಗ್ರಾಮವಾದ ಇರ್ಶಲವಾಡಿಯಲ್ಲಿ ಜುಲೈ 19ರಂದು ರಾತ್ರಿ 10:30 ರ ಸುಮಾರಿಗೆ ಭೂಕುಸಿತ ಸಂಭವಿಸಿತ್ತು. ಭೂಕುಸಿತದಲ್ಲಿ ಗ್ರಾಮದ 48 ಮನೆಗಳ ಪೈಕಿ ಕನಿಷ್ಠ 17 ಮನೆಗಳು ಸಂಪೂರ್ಣ ಅಥವಾ ಭಾಗಶಃ ಸಮಾಧಿಯಾಗಿವೆ.

ಇದನ್ನೂ ಓದಿ : Raigad landslide: ಮೃತರ ಸಂಖ್ಯೆ 22ಕ್ಕೆ ಏರಿಕೆ.. ರಕ್ಷಣಾ ಕಾರ್ಯಾಚರಣೆ ಪುನಾರಂಭಿಸಿದ ಎನ್‌ಡಿಆರ್‌ಎಫ್

ಮೃತರ ಕುಟುಂಬಗಳಿಗೆ 5 ಲಕ್ಷ ರೂ. ನೆರವು : ಭೂಕುಸಿತ ದುರಂತದ ನಂತರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದ್ದರು. ಈ ವೇಳೆ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡುವಂತೆ (CIDCO ) ರಾಜ್ಯ-ಚಾಲಿತ ಯೋಜನಾ ಪ್ರಾಧಿಕಾರ ನಗರ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ ನಿರ್ದೇಶನ ನೀಡಿದ್ದಾರೆ. ಘಟನೆ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಏಕನಾಥ್ ಶಿಂಧೆ ಅವರೊಂದಿಗೆ ಚರ್ಚಿಸಿದ್ದಾರೆ. ಇರ್ಶಲವಾಡಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್‌ನ ನಾಲ್ಕು ಘಟಕಗಳನ್ನು ನಿಯೋಜಿಸಲಾಗಿತ್ತು.

ಅನಾಥ ಮಕ್ಕಳ ದತ್ತು- ಸಿಎಂ ಶಿಂಧೆ : ಭೂಕುಸಿತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆಯುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ಟ್ವೀಟ್ ಮಾಡಿದ್ದಾರೆ. ಶ್ರೀಕಾಂತ್ ಶಿಂಧೆ ಫೌಂಡೇಶನ್ 14 ವರ್ಷದೊಳಗಿನ ಅನಾಥ ಮಕ್ಕಳ ಆರೈಕೆ ಮಾಡಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ : ರಾಯಗಡ ಭೂಕುಸಿತದಲ್ಲಿ ಸಾವಿನ ಸಂಖ್ಯೆ 16ಕ್ಕೇರಿಕೆ; ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ, 119 ಮಂದಿಗಾಗಿ ಶೋಧ ತೀವ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.