ಹೈದರಾಬಾದ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೈದರಾಬಾದ್ನ ಜಿಯಾಗುಡಾ ವಿಭಾಗದಲ್ಲಿ ಮಹಾನಗರ ಪಾಲಿಕೆ ಚುನಾವಣಾ ಬೃಹತ್ ರ‍್ಯಾಲಿಗೆ ಇಂದು ಬೆಳಗ್ಗೆ ಚಾಲನೆ ನೀಡಿದರು.
ಚಾಲನೆ ನೀಡಿದ ಬಳಿಕ ಪಾದಯಾತ್ರೆ ನಡೆಸಿ ಬಿಜೆಪಿ ಬೆಂಬಲಿಸುವಂತೆ ಮತದಾರರಲ್ಲಿ ಕೋರಿದರು. ಬಳಿಕ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿದೆ ಎಂದು ಪಕ್ಷಕ್ಕೆ ಮತ ಹಾಕುವಂತೆ ಮನವಿ ಮಾಡಿದರು.