ನವದೆಹಲಿ : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಿನ್ನೆಯಷ್ಟೇ ಅವರ ಮಕ್ಕಳ ಇನ್ಸ್ಟಾಗ್ರಾಮ್ ಖಾತೆಯನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎಂದು ಆರೋಪಿಸಿದ ಬೆನ್ನಲ್ಲೇ, ಮಾಧ್ಯಮ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಬಗ್ಗೆ ದೂರು ದಾಖಲಿಸಿಕೊಂಡಿದೆ.
ಉತ್ತರಪ್ರದೇಶ ಸರ್ಕಾರ ವಿಪಕ್ಷ ನಾಯಕರ ಫೋನ್ ಕದ್ದಾಲಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ನಿನ್ನೆ ಲಖನೌನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ವಿಪಕ್ಷ ನಾಯಕರ ಫೋನ್ ಕದ್ದಾಲಿಸಿದರೆ, ಕೇಂದ್ರ ಸರ್ಕಾರ ನನ್ನ ಮಕ್ಕಳ ಇನ್ಸ್ಟಾಗ್ರಾಮ್ ಖಾತೆಗಳನ್ನು ಹ್ಯಾಕ್ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಇದನ್ನೂ ಓದಿ: ನನ್ನ ಮಕ್ಕಳ ಇನ್ಸ್ಟಾಗ್ರಾಂ ಹ್ಯಾಕ್ ಮಾಡಿದ್ದಾರೆ: ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ
ಇದೀಗ ಕೇಂದ್ರ ಸರ್ಕಾರ ಪ್ರಿಯಾಂಕಾ ವಾದ್ರಾರ ಆರೋಪವನ್ನು ಗಂಭೀರವಾಗಿ ಪರಿಗಣಿಸಿದೆ. ಅವರ ಹೇಳಿಕೆಯ ಆಧಾರದ ಮೇಲೆ ದೂರು ದಾಖಲಿಸಿಕೊಂಡಿದೆ ಎಂದು ಮಾಧ್ಯಮ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.